Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಜಾರ್ಖಂಡ್; ಪೊಲೀಸ್ ಎನ್ ಕೌಂಟರ್ – 12 ನಕ್ಸಲೀಯರು ಬಲಿ

encounterಜಾರ್ಖಂಡ್: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪೊಲೀಸರ ಎನ್ ಕೌಂಟರ್ ಗೆ ಸುಮಾರು 12 ಮಂದಿ ನಕ್ಸಲೀಯರು ಬಲಿಯಾಗಿರುವ ಘಟನೆ ಜಾರ್ಖಂಡ್ ನ ಪಾಲಾಮೌ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 140 ಕಿಲೋ ಮೀಟರ್ ದೂರದ ಬಾಕೋರಿಯಾ ಗ್ರಾಮದಲ್ಲಿ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, 12 ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಟೇಲ್ ಹೇಳಿದ್ದಾರೆ.

ಜಿಲ್ಲೆಯಲ್ಲಿನ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿತ್ತು. ಕೂಂಬಿಂಗ್ ಸಂದರ್ಭದಲ್ಲಿ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರು, ಆಗ ನಡೆಸಿದ ಪ್ರತಿದಾಳಿಗೆ ನಕ್ಸಲೀಯರು ಸಾವನ್ನಪ್ಪಿದ್ದಾರೆ ಎಂದು ಸಹಾಯಕ ಪೊಲೀಸ್ ಮಹಾನಿರ್ದೇಶಕ ಎಸ್ ಎನ್ ಪ್ರಧಾನ್ ಪಿಟಿಐಗೆ ವಿವರಿಸಿದ್ದಾರೆ.

No Comments

Leave A Comment