Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ದೇಶದಲ್ಲಿ ಭಯದ ವಾತಾವರಣ; ಅಪಶಕುನ ಮೋದಿ ವಿರುದ್ಧ ಸೋನಿಯಾ ವಾಗ್ದಾಳಿ

SONIAWEBನವದೆಹಲಿ (ಪಿಟಿಐ): ಜಾತಿ ಧ್ರುವೀಕರಣದ ಮೂಲಕ ನರೇಂದ್ರ ಮೋದಿ ಸರ್ಕಾರ ದೇಶದಲ್ಲಿ ಭಯದ ವಾತಾವರಣ ನಿರ್ಮಿಸಿದೆ. ಮೋದಿ ಆಡಳಿತವು ಇಡೀ ದೇಶಕ್ಕೆ ಅಪಶಕುನ. ಇದು ಮುಂಬರುವ ಯಾವುದೋ ಮಹಾ ಕೆಡುಕಿನ ಮನ್ಸೂಚನೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಮಂಗಳವಾರ ಇಲ್ಲಿ, ಕಾಂಗ್ರೆಸ್‌ ಮುಖ್ಯಮಂತ್ರಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಮತ್ತು ಅವರ ತಂಡ ವ್ಯವಸ್ಥಿತವಾಗಿ ಕೆಲವು ಅಪಾಯಕಾರಿ ನೀತಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.  ಭೂಸ್ವಾಧೀನ ತಿದ್ದುಪಡಿ ಮಸೂದೆ ಮತ್ತು ಆಹಾರ ಭದ್ರತಾ ಮಸೂದೆಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಬಲವಾಗಿ ವಿರೋಧಿಸಬೇಕು ಎಂದರು.

ಮೋದಿ ಅವರು ತಮ್ಮನ್ನು ತಾವು ಮಹಾನ್‌ ನಾಯಕ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ತಮ್ಮ ಪಕ್ಷ ಅತ್ಯುತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಅಭಿರುಚಿಹೀನ  ಹೇಳಿಕೆಗಳನ್ನು ನೀಡುವ ಮೂಲಕ ದೇಶದಲ್ಲಿ ಮತೀಯ ಭಾವನೆ ಕೆರಳಿಸುವ ತುಚ್ಛ ಕೆಲಸ ಮಾಡುತ್ತಿದ್ದಾರೆ ಎಂದರು.

No Comments

Leave A Comment