Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ: ಕಿರುತೆರೆ ನಟಿ ಬಂಧನ

hitecಬೆಂಗಳೂರು: ಅಮಾಯಕ ಯುವತಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿಯೊಬ್ಬರನ್ನು ಬುಧವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜನಗರ ಬಡಾವಣೆಯ ಎಂ.ಆರ್.ಸಿ. ಲೇಔಟ್​ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ತಂಡ, ಕಿರುತೆರೆ ನಟಿಯನ್ನು ಬಂಧಿಸಿ, ತುಮಕೂರು ಮೂಲದ ಓರ್ವ ಯುವತಿಯನ್ನು ರಕ್ಷಿಸಿದೆ.

ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಯೂಟಿ ಪಾರ್ಲರ್​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಬೇರೆ ಕಡೆಗಳಿಂದ ಮಹಿಳೆಯರನ್ನು ಕರೆತರುತ್ತಿದ್ದ ಕಿರುತೆರೆ ನಟಿ, ಅವರನ್ನು ಬಲವಂತವಾಗಿ ವೇಶ್ಯಾವಾಟಿಕಗೆ ದೂಡುತ್ತಿದ್ದಳೆಂದು ಪೊಲೀಸ್ ಮೂಲಗಳು ತಿಳಿಸಿವೆ.

No Comments

Leave A Comment