Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರ ಸ್ವೀಕಾರ

Lakshmi_hebbalkarಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಪಕ್ಷದ ಕೆಲ ಶಾಸಕರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯ

ಬೆಳಗಾವಿ ಮೂಲದ ಲಕ್ಷ್ಮೀ ಹೆಬ್ಬಾಳ್ಕರ್ ಎಂಎ ಪದವೀಧರೆಯಾಗಿದ್ದು, ಕರ್ನಾಟಕ ಮಹಿಳಾ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಬಿಜೆಪಿಯ ಸುರೇಶ್ ಅಂಗಡಿ ವಿರುದ್ಧ ಸ್ಪರ್ಧಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರು 4,78,557 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಪಕ್ಷದದಲ್ಲಿ ಗುರುತಿಸಿಕೊಂಡಿರುವ ಹೆಬ್ಬಾಳ್ಕರ್ ಅವರು ಯುವ ಕಾಂಗ್ರೆಸ್ ಮತ್ತು ಕೆಪಿಸಿಸಿಯ ಹಲವಾರು ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ.

No Comments

Leave A Comment