Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ವಿದ್ಯಾರ್ಥಿಗಳು ಸ್ಪರ್ಧೆ ಎದುರಿಸಲು ಸಜ್ಜಾಗಿ- ಆರ್.ವಿ. ದೇಶಪಾಂಡೆ

1ಉಡುಪಿ: ಇಂದಿನ ಸ್ಪರ್ಧಾಯುಗದಲ್ಲಿ ಎಲ್ಲಾ ರೀತಿಯ ಸ್ಪರ್ಧೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.2

ಅವರು ಮಣಿಪಾಲದ ಶಿವಳ್ಳಿಯಲ್ಲಿ ರೂ.೮ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟಿಸಿ ಮಾತನಾಡಿದರು.3

ಪ್ರಸಕ್ತ ಸ್ಪರ್ಧಾಯುಗದಲ್ಲಿ ಶಿಕ್ಷಣರಂಗದಲ್ಲಿ ಸರಕಾರದೊಂದಿಗೆ ಹಲವು ಖಾಸಗಿ ಸಂಸ್ಥೆಗಳು ಪೈಪೋಟಿ ನೀಡುತ್ತಿದ್ದು, ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಕೊರತೆ ಆಗದಂತೆ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ, ರಾಜ್ಯದಲ್ಲಿ ೮೧ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿದ್ದು, ಅವುಗಳಲ್ಲಿ ೨೧ ಪಾಲಿಟೆಕ್ನಿಕ್‌ಗಳಿಗೆ ಸ್ವಂತ ಕಟ್ಟಡ ಒದಗಿಸಲಾಗಿದೆ.

ರಾಜ್ಯದಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸುಸಜ್ಜಿತವಾದ ಲ್ಯಾಬ್ ಹಾಗೂ ಗ್ರಂಥಾಲಯಗಳನ್ನು ಒದಗಿಸಲಾಗಿದೆ, ಶಿಕ್ಷಕರ ಕೊರತೆ ಇರುವಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ, ಈ ಬಾರಿ ೧೭೨ ನೇಮಕಾತಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂದಿನ ಆಧುನಿಕ ಯುಗದಲ್ಲಿ ತಾಂತ್ರಿಕ ಜ್ಞಾನಕ್ಕೆ ಹೆಚ್ಚಿನ ಮಹತ್ವ ಇದೆ, ವಿದ್ಯಾರ್ಥಿಗಳು ಸರಕಾರದಿಂದ ದೊರೆಯುವ ಎಲ್ಲಾ ಸೌಕರ್ಯಗಳನ್ನು ಬಳಸಿಕೊಂಡು ಯಾವುದೇ ಸವಾಲು ಎದುರಿಸಲು ಸಿದ್ಧರಾಗಬೇಕು ಎಂದು ಸಚಿವರು ಹೇಳಿದರು.

ಉಡುಪಿ ಸರ್ಕಾರಿ ಪಾಲಿಟಿಕ್ನಿಕ್‌ಗೆ ಇಂಟರ್ ಲಾಕ್ ಅಳವಡಿಕೆ, ಕಾಂಪೌಂಡ್ ಕಟ್ಟಡ ಮತ್ತು ನೀರಿನ ವ್ಯವಸ್ಥೆಗಾಗಿ ರೂ.೫೫ ಲಕ್ಷಗಳ ವಚ್ಚದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಶಾಸಕ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸವಿತಾ ಶಿವಾನಂದ ಕೋಟ್ಯಾನ್, ನಗರಸಭೆಯ ಅಧ್ಯಕ್ಷ ಪಿ.ಯುವರಾಜ್, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಚಂದ್ರಶೇಖರ್, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ತಳವಾರ್, ತಾಂತ್ರಿಕ ಸಹಾಯಕ ರಾಮಲಿಂಗಯ್ಯ , ಕಟ್ಟಡ ಗುತ್ತಿಗೆದಾರ ವಾಸುದೇವ ಶೆಟ್ಟಿ ಉಪಸ್ಥಿತರಿದ್ದರು.

ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಗಣಪತಿ ಸ್ವಾಗತಿಸಿದರು

No Comments

Leave A Comment