Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ತೋಮರ್

tomarನವದೆಹಲಿ: ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.

ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಅವರನ್ನು ಇಂದು ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೋಮರ್ ಅವರನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ತೋಮರ್ ಅವರನ್ನು ಮತ್ತೆರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ನಕಲಿ ಪ್ರಮಾಣ ಪತ್ರ ಹೊಂದಿದೆ ಆರೋಪದ ಮೇಲೆ ಕಳೆದ ಮಂಗಳವಾರ ದೆಹಲಿ ಕಾನೂನು ಸಚಿವರಾಗಿದ್ದ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ದೆಹಲಿಯ ಮೆಟ್ರೋಪಾಲಿಟನ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಇನ್ನು ಪ್ರಕರಣದಿಂದ ಆಪ್ ಪಕ್ಷ ತೀವ್ರ ಮುಜುಗರಕ್ಕೀಡಾದ ಹಿನ್ನಲೆಯಲ್ಲಿ ತೋಮರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ತೋಮರ್ ರಾಜಿನಾಮೆ ಪತ್ರವನ್ನು ಅಂಗೀಕರಿಸಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜಿನಾಮೆ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ರವಾನೆ ಮಾಡಿದ್ದರು.

No Comments

Leave A Comment