Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಭಾರತದ ಶ್ರೇಷ್ಠ ವಾಸ್ತುಶಿಲ್ಪಿ ಚಾರ್ಲ್ಸ್ ಕೊರೆಯಾ ನಿಧನ

Charles-ಮುಂಬೈ: ಆಧುನಿಕ ಭಾರತದ ಶ್ರೇಷ್ಠ ವಾಸ್ತುಶಿಲ್ಪಿ ಎಂದೇ ಖ್ಯಾತಿಗಳಿಸಿದ್ದ ಚಾರ್ಲ್ಸ್ ಕೊರೆಯಾ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೆಪ್ಟಂಬರ್‌ 1ರಂದು ಸಿಕಂದರಾಬಾದ್‌ನಲ್ಲಿ ಜನಿಸಿದ್ದ ಕೊರೆಯಾ ಅವರಿಗೆ 84 ವರ್ಷ ವಯಸ್ಸಾಗಿತ್ತು. ಮುಂಬಯಿಯ ಸೈಂಟ್‌ ಕ್ಸೇವಿಯರ್‌ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಕೊರೆಯಾ ಅವರು ಆ ಬಳಿಕ ಮಿಶಿಗನ್‌ ವಿವಿಯಲ್ಲಿ ಹಾಗೂ ವಿಶ್ವಪ್ರಸಿದ್ಧ ಮಸ್ಯಾಚುಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿ (ಎಂಐಟಿ) ಶಿಕ್ಷಣ ಪಡೆದಿದ್ದರು.

ಚಾರ್ಲ್ಸ್ ಕೊರೆಯಾ ಅವರು ಅನೇಕ ವಾಸ್ತು ವೈಭವ ಅನನ್ಯತೆಯ ಕಟ್ಟಡಗಳ ನಿರ್ಮಾಣದಲ್ಲಿ ಪ್ರಧಾನ ಪಾತ್ರವಹಿಸಿದ್ದರು. ಅಹ್ಮದಾಬಾದ್ ನಲ್ಲಿ ಮಹಾತ್ಮಾಗಾಂಧಿ ಅವರ ಸ್ಮಾರಕ ಹಾಗೂ ಮಧ್ಯಪ್ರದೇಶದಲ್ಲಿ ವಿಧಾನಸಭಾ ಕಟ್ಟಡಗಳನ್ನು ಕಲಾತ್ಮಕಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. 1970ರಲ್ಲಿ ನವೀ ಮುಂಬಯಿಯನ್ನು ರೂಪಿಸುವಲ್ಲಿ ಪ್ರಧಾನ ಶಿಲ್ಪಿಯಾಗಿ ಕಾರ್ಯನಿರ್ವಹಿಸಿದ್ದ ಕೊರೆಯಾ ಅವರು 1984 ರಲ್ಲಿ ಮುಂಬೈನಲ್ಲಿ ನಗರ ಸಂಶೋಧನಾ ಸಂಸ್ಥೆಯೊಂದನ್ನು ರೂಪಿಸಿ ಪರಿಸರ ಸಂರಕ್ಷಣೆ ಹಾಗೂ ನಗರಾಭಿವೃದ್ಧಿಗಳಿಗೆ ಅರ್ಪಿಸಿದ್ದರು. ನಂತರ ರಾಷ್ಟ್ರೀಯ ನಗರೀಕರಣ ಆಯೋಗದ ಮೊದಲ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಕೊರೆಯಾ ಅವರು ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಅಲ್ಲದೆ, 1972ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಹಾಗೂ 2006 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

ಚಾರ್ಲ್ಸ್ ಕೊರೆಯಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಚಾರ್ಲ್ಸ್ ಕೊರೆಯಾ ಅವರು ಉತ್ತಮ ಶಿಲ್ಪಕಾರನಾಗಿದ್ದು, ಅವರ ಸದಭಿರುಚಿ, ಉತ್ಸಾಹ, ಶಿಲ್ಪಾಕಾರನಾಗಿ ಅವರಿಗಿರುವ ಅದ್ಭುತ ಪ್ರತಿಭೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಟ್ವಿಟ್ಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

No Comments

Leave A Comment