Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ನ್ಯಾಯಾಧೀಶ ಶಿವಶಂಕರ ಅಭಿಮತ ‘ಆರೋಗ್ಯ ಸುಧಾರಣೆಗೆ ರಕ್ತದಾನ ಪೂರಕ’

16udp-blood-1ಉಡುಪಿ: ‘ಆರೋಗ್ಯವಂತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನದಿಂದ ಮತ್ತೊಬ್ಬರ ಜೀವವನ್ನು ಉಳಿಸಬಹುದು ಹಾಗೂ ಇದರಿಂದ ದಾನಿಯ ಆರೋಗ್ಯವೂ ಸುಧಾರಿಸುತ್ತದೆ’ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಧೀಶ ಶಿವಶಂಕರ ಬಿ ಅಮರಣ್ಣವರ್‌ ಹೇಳಿದರು.

ಜಿಲ್ಲಾಡಳಿತ, ರಾಜ್ಯ ಏಡ್ಸ್ ಪ್ರಿವೆನ್‌ಷನ್‌ ಸೊಸೈಟಿ, ಭಾರತೀಯ ರೆಡ್‌ಕ್ರಾಸ್‌ ಸೊಸೈಟಿಯ ಉಡುಪಿ ಘಟಕ, ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಉಡುಪಿ ಘಟಕ, ಸರ್ಕಾರಿ ನೌಕರರ ಸಂಘದ ಉಡುಪಿ ಘಟಕ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ, ವಿದ್ಯಾರತ್ನ ಕಾಲೇಜ್‌ ಆಫ್‌ ನರ್ಸಿಂಗ್‌, ಉಡುಪಿ ಸಿಟಿ ನರ್ಸಿಂಗ್‌ ಸ್ಕೂಲ್‌, ಮಿತ್ರಾ ನರ್ಸಿಂಗ್‌ ಸ್ಕೂಲ್‌ ಹಾಗೂ ದನ್ವಂತರಿ ನರ್ಸಿಂಗ್‌ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದರು.

‘ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ದಾನ ಶ್ರೇಷ್ಠದಾನವಾಗಿದೆ. ಪ್ರತಿಯೊ ಬ್ಬರು ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸುವ ಕೆಲಸ ಮಾಡಬೇಕು’ ಎಂದು ಶಾಸಕ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ವಿಜ್ಞಾನ ತಂತ್ರಜ್ಞಾನ ಮುಂದುವರೆ ದರೂ ರಕ್ತಕ್ಕೆ ಪರ್ಯಾಯವಾದ ವಸ್ತು ಕಂಡುಹಿಡಿಯಲು ಆಗಿಲ್ಲ. ರಕ್ತದಾನ ವನ್ನು ಸಾಮಾಜಿಕ ಹೊಣೆಗಾರಿಕೆ ಎಂದು ಎಲ್ಲರೂ ಭಾವಿಸಬೇಕು. ಈ ನಿಟ್ಟಿನಲ್ಲಿ  ಸ್ವಯಂ ಪ್ರೇರಿತ ರಕ್ತದಾನಕ್ಕೆ ಸಾರ್ವಜನಿ ಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಯಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ಹೇಳಿದರು.

‘ದೇಶದಲ್ಲಿ ಪ್ರತಿ ವರ್ಷ 90 ಲಕ್ಷ ಯೂನಿಟ್‌ ರಕ್ತ ಸಂಗ್ರಹವಾದರೂ ರಕ್ತದ ಕೊರತೆ ಇನ್ನೂ ಇದೆ. ಪ್ರತಿ ವರ್ಷ ಸುಮಾರು 30 ಲಕ್ಷ ಯೂನಿಟ್‌ ರಕ್ತದ ಕೊರತೆಯಾಗುತ್ತಿದೆ. ದೇಶದ ಶೇ1ರಷ್ಟು ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶೇ2ರಷ್ಟು ಜನರು ರಕ್ತದಾನ ಮಾಡು ತ್ತಿದ್ದಾರೆ. ಆದ್ದರಿಂದ ರಕ್ತ ಸಂಗ್ರಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದ ಲ್ಲಿದೆ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ. ನಿಕಿನ್‌ ಶೆಟ್ಟಿ ಹೇಳಿದರು.

ಶಿವಶಂಕರ ಬಿ ಅಮರಣ್ಣವರ್‌ ಅವರು ಸ್ವತಃ ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಸರ್ಜನ್‌ ಡಾ. ಆರ್‌. ಮಹೇಂದ್ರ, ಭಾರ ತೀಯ ರೆಡ್‌ಕ್ರಾಸ್‌ ಸೊಸೈಟಿ ಉಡುಪಿ ಶಾಖೆ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

No Comments

Leave A Comment