Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಬೈಂದೂರಿನ ಅಕ್ಷತಾ ನಿಗೂಢ ಸಾವು ಪ್ರಕರಣ: ತನಿಖೆಗೆ ಎರಡು ತಂಡ ರಚನೆ: ಐಜಿಪಿ

AKSHA1-BCKಉಡುಪಿ: ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ(17) ಅವರ ಅಸಹಜ, ನಿಗೂಢ ಸಾವಿನ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದ್ದರೂ, ಇದುವರೆಗೆ ಖಚಿತವಾದ ಯಾವುದೇ ಸುಳಿವು ಸಿಗದೆ ಪೊಲೀಸರು ಪರದಾಡುತ್ತಿದ್ದಾರೆ.

ಒತ್ತಿನೆಣೆ ಹೇನ್‌ಬೇರುವಿನ ಬಾಬು ದೇವಾಡಿಗ ಹಾಗೂ ರಾಧಾ ದೇವಾಡಿಗ ದಂಪತಿಯ ಪುತ್ರಿಯಾದ ಅಕ್ಷತಾ ನಿನ್ನೆ ಕಾಲೇಜಿಗೆ ಹೋದವಳು ಸಂಜೆಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಮನೆಯವರು ಹುಡುಕಿದಾಗ ಅಲ್ಲೇ ಸಮೀಪದ ಒತ್ತಿನೆಣೆ ಗುಡ್ಡದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ಕೊಲೆಯಾಗಿದೆ ಎಂಬುದು ಜನರ ಅಭಿಪ್ರಾಯವಾದರೂ ಅದಕ್ಕೆ ಪೂರಕವಾದ ಯಾವುದೇ ಪುರಾವೆಗಳಿಲ್ಲದೇ, ಈ ಸಾವು ನಿಗೂಢವಾಗುಳಿದಿದೆ.

 ಪಶ್ಚಿಮ ವಲಯ ಐಜಿಪಿ ಅಮೃತಪಾಲ್ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ತನಿಖೆಗಾಗಿ ಎರಡು ತಂಡಗಳನ್ನು ರಚಿಸ ಲಾಗಿದ್ದು, ಕೆಲವು ಸುಳಿವುಗಳು ದೊರಕಿವೆ. ಆದರೆ ಖಚಿತವಾಗಿ ಹೇಳಲು ಈಗಲೇ ಸಾಧ್ಯವಿಲ್ಲ ಎಂದರು.

ಮಣಿಪಾಲ ಕೆಎಂಸಿಯಲ್ಲಿ ಪೋಸ್ಟ್‌ಮಾರ್ಟಂ ನಡೆಸಲಾ ಗಿದ್ದು, ಅದರ ವರದಿ ಬಂದ ನಂತರವಷ್ಟೇ ಸಾವಿನ ಕಾರಣವನ್ನು ಖಚಿತವಾಗಿ ಹೇಳಲು ಸಾಧ್ಯವಾಗುತ್ತದೆ ಎಂದರು. ಇದೇ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ ನಡೆದ ರತ್ನಾ ಕೊಠಾರಿಯ ಪ್ರಕರಣದಂತೆ ಇದೂ ಆಗುವ ಸಾಧ್ಯತೆ ಕುರಿತು ಕೇಳಿದಾಗ, ಅದಕ್ಕೂ ಇದಕ್ಕೂ ಹೋಲಿಕೆ ಬೇಡ. ರತ್ನಾ ಸಾವು ಸಹಜವಾಗಿ ಆಗಿದೆ ಎಂದು ಮರಣೋತ್ತರ ವರದಿ ತಿಳಿಸಿತ್ತು ಎಂದರು.
ದಿನವಿಡೀ ಘಟನಾ ಸ್ಥಳದಲ್ಲಿದ್ದ ಜಿಲ್ಲಾ ಎಸ್ಪಿ ಅಣ್ಣಾಮಲೈ ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದ್ದು, ಎರಡು-ಮೂರು ದಿನಗಳಲ್ಲಿ ಖಚಿತ ವಾಗಿ ಏನನ್ನೂ ಹೇಳಲು ಸಾಧ್ಯವಾಗುವುದು ಎಂದು ಅವರು ಹೇಳಿದರು.

ಸೊರಕೆ ಭೇಟಿ, 5 ಲಕ್ಷ ರೂ. ಘೋಷಣೆ: ಹೇನ್‌ಬೇರು ವಿನಲ್ಲಿರುವ ಅಕ್ಷತಾ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಶಾಸಕ ಗೋಪಾಲ ಪೂಜಾರಿ ಭೇಟಿ ನೀಡಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಾವಿನ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಸಾವಿನ ಕಾರಣ ಖಚಿತವಾದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.

ಇದೇ ವೇಳೆ ಅಕ್ಷತಾ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಬೈಂದೂರು ಶಾಸಕ ಗೋಪಾಲ ಪೂಜಾರಿ ಘೋಷಿಸಿದ್ದು, ಈ ಬಗ್ಗೆ ತಾನು ಗೃಹ ಸಚಿವ ಕೆ.ಜೆ.ಜಾರ್ಜ್ ರೊಂದಿಗೆ ಮಾತನಾಡಿದ್ದು, ಅವರು ಒಪ್ಪಿರುವುದಾಗಿ ತಿಳಿಸಿದರು.

ಆರೋಪಿಗಳ ಬಂಧನಕ್ಕೆ ಸಿಎಫ್‌ಐ ಒತ್ತಾಯ:  ಅಕ್ಷತಾ ಅವರ ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಸಿಎಫ್‌ಐ ಉಡುಪಿ ಜಿಲ್ಲಾ ಘಟಕ ಒತ್ತಾಯಿಸಿದೆ.

No Comments

Leave A Comment