Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಹಳಿ ತಪ್ಪಿದ ಕೊಯಂಬತ್ತೂರು ಶತಾಬ್ದಿಎಕ್ಸ್ ಪ್ರೆಸ್

Coimbatoಕೊಯಂಬತ್ತೂರು: ಕೊಯಂಬತ್ತರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಚೆನ್ನೈನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಕೊಯಂಬತ್ತೂರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಿಗ್ಗೆ 7.15 ರ ಸುಮಾರಿಗೆ ಹೊರಡಬೇಕಿತ್ತು. ಆದರೆ, ಕಾರಣಾಂತರಿಗಳಿಂದ ರೈಲು ಹೊರಡುವ ಸಮಯವನ್ನು 10.30ಕ್ಕೆ ಮುಂದೂಡಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ರೈಲು ಹೊರಡಲು ಪ್ರಾರಂಭಿಸಿದಾಗ ಖಾಲಿ ಇದ್ದ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment