Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಬೈಂದೂರಿನ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

11ಉಡುಪಿಯ ಕ್ಲಾಕ್ ಟವರ್‌ನಲ್ಲಿ ಬೈಂದೂರಿನ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ಮೃದು ಧೋರಣೆಗೆ ವ್ಯಾಪಕ ಖಂಡನೆ ವ್ಯಕ್ತವಾಯಿತು.

ವಿದ್ಯಾರ್ಜನೆಗೆ ಅತ್ಯಂತ ಪ್ರಸಿದ್ಧವಾದ ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು, ಲೈಂಗಿಕ ಕಿರುಕುಳ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೊರ ಜಿಲ್ಲೆಗಳಿಂದ ಇಲ್ಲಿ ಬಂದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ತೀವ್ರ ತರಹದ ಭಯದ ವಾತಾವರಣ ನಿರ್ಮಾಣ ಆಗಿದೆ. ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದರಿಂದ ಜನ ಸಾಮಾನ್ಯರಲ್ಲಿ ಮತ್ತು ವಿದ್ಯಾರ್ಥಿ ವಲಯದಲ್ಲಿ ಪೋಲಿಸ್ ಇಲಾಖೆಯ ಅಸ್ತಿತ್ವದ ಬಗ್ಗೆ ಸಂಶಯ ನಿರ್ಮಾಣ ಆಗಿದೆ.

ಕಳೆದ ವರ್ಷ ನಡೆದ ರತ್ನ ಕೊಠಾರಿ ಸಾವು ಇನ್ನು ನಿಗೂಢವಾಗಿ ಉಳಿದಿದ್ದು ಇಂದು ಅದೇ ಪರಿಸರದಲ್ಲಿ ಮತ್ತೊಂದು ವಿದ್ಯಾರ್ಥಿನಿ ಅಕ್ಷತಾರವರ ಹತ್ಯೆ ಆಗಿರುವುದು ಪೋಲಿಸ್ ಇಲಾಖೆಯ ವೈಫಲ್ಯಕ್ಕೆ ಪ್ರತ್ಯಕ್ಷ ನಿದರ್ಶನ. ಇಂದಿನ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಇಂತಹ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕಾಗಿ ಆಗ್ರಹಿಸಲಾಯಿತು. ಮತ್ತು ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಎಚ್ಚರಿಕೆಯನ್ನು ವಹಿಸಬೇಕೆಂದು ಒತ್ತಾಯಿಸಲಾಯಿತು.

ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಬನ್ನಂಜೆ ತಹಶೀಲ್ದಾರ್ ಕಛೇರಿಗೆ ತೆರಳಿ ಈ ಕುರಿತು ಮನವಿಯನ್ನು ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಎಬಿವಿಪಿಯ ರಾಜ್ಯ ಕಾರ್‍ಯಕಾರಿಣಿ ಸದಸ್ಯರಾದ ಶಿವಾನಂದ ನಾಯಕ್, ಅಕ್ಷಯ, ನಗರ ಕಾರ್‍ಯದರ್ಶಿ ಕಾರ್ತಿಕ್, ಆದಿ, ಮಾತನಾಡಿದರು. ಹಾಗೂ ಸುಬ್ರಹ್ಮಣ್ಯ, ಶಶಿಕಾಂತ್, ಪ್ರೀತಿ, ಚಂದ್ರಿಕಾ, ಶಶಿಕಿರಣ್, ಸತ್ಯೇಂದ್ರ ಉಪಸ್ಥಿತರಿದ್ದರು.

No Comments

Leave A Comment