Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮುಂಬೈನಲ್ಲಿ ತಗ್ಗಿದ ಮಳೆ ಆರ್ಭಟ; ಜನಜೀವನ ಸಹಜಸ್ಥಿತಿಗೆ, ರೈಲು ಆರಂಭ

mumbai-rain_ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ವರುಣನ ಆರ್ಭಟ ಶನಿವಾರ ಕಡಿಮೆಯಾಗಿದ್ದು, ಜನಜೀವನ ಯಥಾಸ್ಥಿತಿಗೆ ಮರಳುತ್ತಿದೆ. ರಸ್ತೆ, ರೈಲ್ವೆ ಹಳಿಗಳ ಮೇಲೆ ತುಂಬಿದ್ದ ನೀರು ನಿಧಾನಕ್ಕೆ ಇಳಿದಿದ್ದು, ರೈಲು ಸೇವೆ ಪುನರಾರಂಭಗೊಂಡಿದೆ.

ಆದರೆ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಸಿದೆ. ಆ ನಿಟ್ಟಿನಲ್ಲಿ ಜನರು ಶನಿವಾರ ಹೊರಹೋಗದೆ ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆಯ ಮುಖ್ಯಸ್ಥ ಅಜೋಯ್ ಮೆಹ್ತಾ ತಿಳಿಸಿದ್ದಾರೆ.

ಕಳೆದ ಗುರುವಾರ ರಾತ್ರಿಯಿಂದ ಮುಂಬೈ ನಗರಿಯಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ರೈಲು ನಿಲ್ದಾಣಗಳು, ತಗ್ಗು ಪ್ರದೇಶಗಳು, ಜನನಿಬಿಡ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದವು. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾನಗರಿಯಲ್ಲಿ 283 ಮಿ.ಮೀನಷ್ಟು ಮಳೆಯಾಗಿದೆ. ಇದು ಸಾಮಾನ್ಯವಾಗಿ ಮುಂಗಾರು ಹಂಗಾಮಿನಲ್ಲಿ 10 ದಿನಗಳಲ್ಲಿ ಸುರಿಯುವ ಮಳೆಗೆ ಸಮನಾಗಿದೆ. ಘಟನೆಗೆ ನಗರದಲ್ಲಿ ಇಬ್ಬರು ಬಲಿಯಾಗಿದ್ದರು.

No Comments

Leave A Comment