Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮೋದಿಗೆ ಕಂಟಕ ತಪ್ಪಿದ್ದಲ್ಲ, ಸಿದ್ದುಗೆ ತೊಂದ್ರೆ ಇಲ್ಲ: ಕೋಡಿಶ್ರೀ

Kodi-shreeಬಾಗಲಕೋಟೆ: ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಸುಷ್ಮಾ ಸ್ವರಾಜ್ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಕಂಟಕ ತಪ್ಪಿದ್ದಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಸದ್ಯಕ್ಕೆ ತೊಂದರೆ ಇಲ್ಲ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಭಾನುವಾರ ಬಾಗಲಕೋಟೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಲಲಿತ್ ಮೋದಿ ಪ್ರಕರಣ ಪ್ರಧಾನಿಗಳಿಗೆ ದೊಡ್ಡ ಕಂಟಕವಾಗಲಿದೆ. ಇದರಿಂದ ನಡೆಯುವ ಹಾದಿ ಮೂರು ಭಾಗವಾದೀತು ಎಂದು ಎಚ್ಚರಿಸಿದರು.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತದೆ. ಕಾರ್ತಿಕ, ಸಂಕ್ರಾತಿ ಬಳಿಕ ದೇಶದಲ್ಲಿ ಅನಾಹುತ ಸಂಭವಿಸಲಿದೆ. ಉತ್ತರ ಭಾರತದಲ್ಲಿ ದೊಡ್ಡ ಆಘಾತದ ಲಕ್ಷಣ, ವರುಣನಿಂದ ಹಾನಿ ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

No Comments

Leave A Comment