Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಉಡುಪಿ;ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ

Scan1ಉಡುಪಿ; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಇಲಾಖೆ, ವಕೀಲರ ಸಂಘ(ರಿ) ಮತ್ತು ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್, ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 21ರಂದು ಕುಂಜಿಬೆಟ್ಟು ವಿನ ಗಾಯತ್ರಿ ಕಲ್ಯಾಣ ಮಂಟಪ ದಲ್ಲಿ ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು ಮತ್ತು ನೊಂದಣಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರ.ದ.ನ್ಯಾ. ದಂಡಾಧಿಕಾರಿಯಾದ ಸುನೀತಾ ಮಾತನಾಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರನ್ನು ಸಂಘಟಿತರನ್ನಾಗಿಸಲು ಮತ್ತು ಸರಕಾರದ ಸವಲತ್ತುಗಳನ್ನು ಒಗದಿಸಲು ರಾಜ್ಯಾದ್ಯಂತ ನೊಂದಣಿ ಅಭಿಯಾನ ಆರಂಭಿಸಲಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗನ್ನು ಪಡೆದುಕೊಳ್ಳಬೇಕು, ಕಾರ್ಮಿಕರು ಸಂಘಟಿತರಾಗಿ, ಗುರುತಿನ ಚೀಟಿಯ ಮೂಲಕ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ದಿನೇಶ್ ಸಿ ನ್ಯಾಕ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್ ಅಸಂಘಟಿತ ಕಾರ್ಮಿಕರಿಗೆ ಸಿಗುವ ಸವಲತ್ತುಗಳು ಕುರಿತು ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀಧರ ಆಚಾರ್ಯ ಕರಂಬಳ್ಳಿ ಮತ್ತು ಶ್ಯಾಮರಾಯ ಆಚಾರ್ಯ ಉಪಸ್ಥಿತರಿದ್ದರು.ಜಯಕರ ಆಚಾರ್ಯ ಸ್ವಾಗತಿಸಿದರು, ವಿಶ್ವನಾಥ ಆಚಾರ್ಯ ವಂದಿಸಿದರು

No Comments

Leave A Comment