Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ದಿಲ್ಲಿ ಜಲಮಂಡಳಿಯಲ್ಲಿ ಭಾರೀ ಅವ್ಯವಹಾರ: ತನಿಖೆಗೆ ಕೇಜ್ರಿ ಸರಕಾರ ಆದೇಶ

sheila-newಹೊಸದಿಲ್ಲಿ, ಜೂ.24: ದಿಲ್ಲಿ ಜಲಮಂಡಳಿಯಲ್ಲಿ ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆಯೆನ್ನಲಾದ ಭಾರೀ ಅವ್ಯವಹಾರ ಪ್ರಕರಣದ ಆಂತರಿಕ ತನಿಖೆಗೆ ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ನೇತೃತ್ವದ ಸರಕಾರ ಆದೇಶಿಸಿದೆ.

ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಲಮಂಡಳಿಯಲ್ಲಿ ಸುಮಾರು 400 ಕೋಟಿ ರೂ.ಗಳ ಅವ್ಯವಹಾರ ನಡೆದಿರುದಾಗಿ ಹೇಳಲಾಗಿದೆ. ಈ ಬಗ್ಗೆ ಸಮಗ್ರ ಆಂತರಿಕ ತನಿಖೆಗೆ ಮುಖ್ಯಮಂತ್ರಿ ಕೇಜ್ರಿವಾಲ್ ಆದೇಶಿಸಿದ್ದಾರೆ. ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಯಂತ್ರಣ ದಳ(ಎಸಿಬಿ)ಕ್ಕೆ ವಹಿಸುವ ಸಾಧ್ಯತೆಯಿದೆ.

ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭಾರತಿ ನೀರು ಸಂಸ್ಕರಣಾ ಘಟಕದ ನಿರ್ಮಾಣ ಕಾರ್ಯದಲ್ಲಿ ಈ ಭಾರೀ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ವಾಟರ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದಾಗಿ ದಿಲ್ಲಿ ಸರಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿದ್ದು, ಯಾರ ವಿರುದ್ಧವೂ ಎಫ್‌ಐಆರ್ ದಾಖಲಾಗಿಲ್ಲ. ಆದರೆ ತನಿಖೆಯು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ರನ್ನು ಕೇಂದ್ರೀಕರಿಸಿ ನಡೆಯಲಿದೆ. ಅದಲ್ಲದೇ ತನಿಖೆಗೆ ಸರಕಾರ ಸಿದ್ಧವಾಗುತ್ತಿರುವಂತೆ ಜಲಮಂಡಳಿಯ ಹಲವು ಹಿರಿಯ ಅಧಿಕಾರಿಗಳು ಆತಂಕಿತರಾಗಿದ್ದಾರೆ.

No Comments

Leave A Comment