Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಕಬ್ಬಿಗೆ ಬೆಂಕಿ ಇಟ್ಟು ಆತ್ಮಹತ್ಯೆಗೆ ಶರಣಾದ ರೈತ

ningegowaddaaaಮಂಡ್ಯ: ಸಾಲಬಾಧೆಯಿಂದ ಬಸವಳಿದಿದ್ದ ರೈತ ನಿಂಗೇಗೌಡ (50) ಎಂಬುವರು ಕಬ್ಬಿನ ಗದ್ದೆಗೆ ಬೆಂಕಿ ಇಟ್ಟು, ಆ ಬೆಂಕಿಗೇ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಗಾಣದಹೊಸೂರು ಗ್ರಾಮದಲ್ಲಿ ಗುರುವಾರ ನಡೆದಿದೆ.

ನಿಂಗೇಗೌಡ ಸಾಲದ ಸುಳಿಗೆ ಸಿಲುಕಿದ್ದರು. ಸಾಲಬಾಧೆಯಿಂದ ಬೇಸತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅರ್ಧ ಎಕರೆ ಜಮೀನಿನಲ್ಲಿ ನಿಂಗೇಗೌಡ ಕಬ್ಬು ಬೆಳೆದಿದ್ದರು. ಬೆಳೆಗಾಗಿ ಸಾಲ ಮಾಡಿಕೊಂಡಿದ್ದರು. ಸಾಲದ ಹೊರೆ ಹೆಚ್ಚಾಗಿ ಅವರು ತಾವು ಬೆಳೆದ ಕಬ್ಬಿನ ಗದ್ದೆಗೆ ಬೆಂಕಿ ಇಟ್ಟು, ಆ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

No Comments

Leave A Comment