Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಮುಂದುವರಿದ ಆತ್ಮಹತ್ಯೆ ಸರಣಿ: ಇಂದು ಹಾವೇರಿಯಲ್ಲಿ ಮತ್ತೊಬ್ಬ ರೈತ ಬಲಿ

jagdishಹಾವೇರಿ : ಸಾಲಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ, ಅದಕ್ಕೆ ತಾನು ಹಾರಿ ಕಬ್ಬು ಬೆಳೆಗಾರನ ಆತ್ಮಹತ್ಯೆ ,ಮೈಸೂರಿನ ರೈತನೊಬ್ಬ ವಿಷ ಸೇವಿಸಿ ಪ್ರಾಣ ತ್ಯಜಿಸಿದ ಬೆನ್ನಲ್ಲೇ ಶನಿವಾರ ಹಾವೇರಿಯಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಹಾವೇರಿ ತಾಲೂಕಿನಕೂರಗುಂದ ಗ್ರಾಮದ ಜಗದೀಶ್ ಕಿಡೇಗಣ್ಣಿ  (32 ) ಎನ್ನುವ ರೈತ ವಿಷ ಸೇವಿಸಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಗದೀಶ್‌ ಅವರು 5 ಎಕರೆ ಜಮೀನು ಹೊಂದಿದ್ದು, ಅದರಲ್ಲಿ 2.5 ಎಕರೆ ಜಮೀನನ್ನು ಏತ ನೀರಾವರಿ ಯೋಜನೆಯಲ್ಲಿ ಕಳೆದುಕೊಂಡಿದ್ದು ಉಳಿದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು  ಎಂದು ಹೇಳಲಾಗಿದೆ.

3 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದು,ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಗುತ್ತಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

No Comments

Leave A Comment