Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಸಿದ್ದರಾಮಯ್ಯ ಮನವಿ

Siddaramaiah-(32)ಬೆಂಗಳೂರು: ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಿದ್ದರಾಮಯ್ಯ ಭರವಸೆ ನೀಡಿದರು.

ಹಳೇ ಸರ್ಕಾರವಿದ್ದಾಗಲೂ ರಾಜ್ಯದಲ್ಲಿ ಆತ್ಮಹತ್ಯೆ ನಡೆದಿದೆ, ಆತ್ಮಹತ್ಯೆ ಪ್ರಕರಣ ಇಂದು ನಿನ್ನೆಯದಲ್ಲ ಎಂದು ರಾಜ್ಯ ರೈತರು ಆತ್ಮಹತ್ಯೆ ಶರಣಾಗುತ್ತಿರುವ  ಕುರಿತು ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

 ರೈತರಿಗೆ ಅನುಕೂಲವಾಗುವಂತಹ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಮಾಧ್ಯಮದೊಂದಿಗೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.

 

No Comments

Leave A Comment