Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮೀನಾ ನೇಮಕಾತಿ ವಿರುದ್ಧ ‘ಹೈ’ ಮೆಟ್ಟಿಲೇರಿದ ದೆಹಲಿ ಸರ್ಕಾರ

kejriwal-jung2ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಖ್ಯಸ್ಥರಾಗಿ ಹಿರಿಯ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ನೇಮಕ ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಸಿಬಿ ಮುಖ್ಯಸ್ಥರನ್ನಾಗಿ ಎಸ್‌ಎಸ್ ಯಾದವ್ ಅವರನ್ನು ನೇಮಕ ಮಾಡಿದ್ದರು. ಆದಾಗ್ಯೂ ಜೂನ್ 9ರಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಅದೇ ಹುದ್ದೆಗೆ ಮೀನಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.

ಇದೀಗ ಆ ನೇಮಕಾತಿಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆ ಅಧಿಕಾರ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧದ ಆಮ್ ಆದ್ಮಿ ಪಕ್ಷದ ಅರ್ಜಿ ವಿಚಾರಣೆಯಾಗುವವರೆಗೆ ಮೀನಾ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಕೋರಿದೆ.

ಮೀನಾ ನೇಮಕಾತಿಗೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಮಧ್ಯೆ ತೀವ್ರ ಜಟಾಪಟಿಯೂ ನಡೆದಿತ್ತು. ಅಲ್ಲದೆ ಮೀನಾ ಅವರ ತರಾತುರಿಯ ನೇಮಕಾತಿ ಹಿಂದೆ ಸಂಚು ಅಡಗಿದೆ ಎಂದು ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಪಾದಿಸಿದ್ದರು.

No Comments

Leave A Comment