Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಇಸ್ಪೀಟ್: ಸಂಸದ ಪ್ರತಾಪ ಸಿಂಹ ಸಹೋದರನ ಬಂಧನ

gambling-indiaಹಾಸನ: ಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಸೇರಿ 9 ಮಂದಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ವಿಕ್ರಂ ಅವರು ಸಕಲೇಶಪುರ ತಾಲೂಕಿನ ಬಿರಡಹಳ್ಳಿಯ ಮನೆಯೊಂದರಲ್ಲಿ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿಯನ್ನು ಆಧರಿಸಿ ಡಿವೈಎಸ್ಸಿ ಪಿ.ವಿ.ಸ್ನೇಹಾ ಅವರು ಸಿಬ್ಬಂದಿ ಜತೆ ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 14 ಸಾವಿರ ರುಪಾಯಿ ನಗದು ಹಾಗೂ 14 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment