Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಆಂಬೂರಿನಲ್ಲಿ ಘರ್ಷಣೆ: 42 ಪೊಲೀಸರಿಗೆ ಗಾಯ/ಮುಸ್ಲಿಂ ಸಮುದಾಯ ಹಾಗೂ ಪೊಲೀಸರ ನಡುವೆ ಘರ್ಷಣೆ

police-Injure-Amburಚೆನ್ನೈ: ಶಮೀಲ್ ಹತ್ಯೆ ವಿರೋಧಿಸಿ ಚೆನ್ನೈನ ಅಂಬೂರಿನಲ್ಲಿ ಮುಸ್ಲಿಂ ಸಮುದಾಯ ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ 42ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಪಳನಿ ಎಂಬ ವ್ಯಕ್ತಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿ ಶಮೀಲ್ ಅಹ್ಮದ್ (26) ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಶಮೀಲ್ ಅಹ್ಮದ್ ಎಂಬ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ, ಶಮೀಲ್ ಅಹ್ಮದ್ ಅವರಿಗೆ ಗಂಭೀರವಾಗಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಮೀಲ್ ಅಹ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಈ ಘಟನೆ ಇದೀಗ ಅಂಬೂರಿನಲ್ಲಿ ಘರ್ಷಣೆಗೆ ಕಾರಣವಾಗಿದ್ದು, ಮುಸ್ಲಿಂ ಸಮುದಾಯದವರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಗಳಿದಿದ್ದಾರೆ. ಪ್ರತಿಭಟನೆ ತೀರ್ವಗೊಂಡು ನಂತರ ಕಲ್ಲುತೂರಾಟ ನಡೆದಿದೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಸ್ಥಳದಲ್ಲಿ 42 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನೆ ವೇಳೆ ಆಂಬೂರು ಡಿಎಸ್ ಪಿ ಗಣೇಶನ್ ಅವರ ಕಾರು, ಸಿಬ್ಬಂದಿಯ ಎರಡು ವಾಹನ ಹಾಗೂ ಬಸ್ ಗಳಿಗೆ ಬೆಂಕಿ ಹಚ್ಚಿದ್ದು, 147ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment