Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಬಿಜೆಪಿ ನಾಯಕರ ಪಾದಯಾತ್ರೆಯಲ್ಲಿ ಭಿನ್ನಮತ ?

bjp

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳಗಾರರ ಬಾಕಿ ಹಣದ ಪಾವತಿಯ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ಪಕ್ಷವು ಭಾನುವಾರ ಪಾದಯಾತ್ರೆ  ಹಮ್ಮಿಕೊಂಡಿದೆ.

ಬೆಳಗಾವಿ ಜಿಲ್ಲೆಯ ಬಡಾಲ ಅಂಕಲಗಿ ಗ್ರಾಮದ ಮೃತ ರೈತ ಗುರುರಾಜ್’ರ ಮನೆಯಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಬಿಜೆಪಿ ಪಕ್ಷದ ನಾಯಕರು ಮೂರು ಗುಂಪುಗಳಾಗಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ರಾಜ್ಯ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯವಿರುವುದನ್ನು ಮೇಲ್ನೊಟಕ್ಕೆ ಕಂಡುಬಂದಿದೆ.

ಇಂದು ಬೆಳಗ್ಗೆ ಪ್ರಾರಂಭವಾದ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಗುಂಪಿನಲ್ಲಿ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಕಾರ್ಯಕರ್ತರು ಕಾಣಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಸಂಸದ ಪ್ರಹ್ಲಾದ್ ಜೋಷಿ ನೇತೃತ್ವದ ಮತ್ತೊಂದು ಗುಂಪು ಕೂಡ ಪಾದಯಾತ್ರೆಗೆ ಚಾಲನೆ ನೀಡಿದೆ ಎಂದು ವರದಿಯಾಗಿದೆ.

ಶಾಸಕ ಸಿಟಿ ರವಿ ಮತ್ತು ಗಣೇಶ್ ಕಾರ್ಣಿಕ್ ಒಳಗೊಂಡ ನಾಯಕರುಗಳ ಇನ್ನೊಂದು ಗುಂಪು ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮೃತ ರೈತ ಗುರುರಾಜ್’ರ ಸ್ವಗ್ರಾಮದಿಂದ ಮೂರು ಗುಂಪುಗಳಾಗಿ ತಮ್ಮ ನಡಿಗೆ ಪ್ರಾರಂಭಿಸಿದ್ದಾರೆಂದು ವರದಿಯಾಗಿದೆ.

No Comments

Leave A Comment