Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಸುವರ್ಣ ಸೌಧಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರ ಬಂಧನ

bgಬೆಳಗಾವಿ: ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬಿನ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಭಾನುವಾರ ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿದರು.

ಪಾದಯಾತ್ರೆಯ ಕೊನೆಯಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಯತ್ನ ವಿಫ‌ಲಗೊಳಿಸಿದ ಪೊಲೀಸರು  ಪ್ರಮುಖ ನಾಯಕರನ್ನು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಈಶ್ವರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ, ಸಂಸದ ಸುರೇಶ ಅಂಗಡಿ ,ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ ರವಿ  ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

 ಮೃತ ರೈತನ ಮನೆಯಿಂದ ಬಿಜೆಪಿ ಪಾದಯಾತ್ರೆ: ಪರಿಹಾರ ವಿತರಣೆ 

ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ ಮನೆಯಿಂದ ಪಾದಾಯಾತ್ರೆ ಆರಂಭಿಸಲಾಯಿತು. ಈ ವೇಳೆ ಬಿಜೆಪಿ ನಾಯಕರು ಕುಟುಂಬಕ್ಕೆ ಸಾಂತ್ವನ ಹೇಳಿ  2 ಲಕ್ಷ ರೂಪಾಯಿ ಪರಿಹಾರ ಧನ ನೀಡಿದರು.

ಸರಕಾರದ ಕಣ್ಣು ತೆರೆಸಲು ರೈತನ ಮನೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ.

ಬಿಜೆಪಿ ಮುಖಂಡರು, ರೈತರು, ಕಾರ್ಯಕರ್ತರು  ಪಾದಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು

ಪಾದಾಯಾತ್ರೆಯ ವೇಳೆ ಭಾರೀ ಪೊಲೀಸ್‌ ಬಂದೊಬಸ್ತ್ ಕೈಗೊಳ್ಳಲಾಗಿತ್ತು.

No Comments

Leave A Comment