Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ವಿಕಲಚೇತನರಿಗೆ ಅರ್ಜಿ ಸಲ್ಲಿಕೆ ವಯೋಮಿತಿ 10 ವರ್ಷ ಸಡಿಲಿಕೆ

handi-cappನವದೆಹಲಿ: ನಾಗರಿಕ ಸೇವೆಗಳನ್ನು ಹೊರತುಪಡಿಸಿ ಇತರ ಎಲ್ಲಾ ಕೇಂದ್ರ ಸರ್ಕಾರಿ ನೌಕರಿಗಳಿಗೆ ಅರ್ಜಿ ಸಲ್ಲಿಸುವ ಅಂಗವಿಕಲ ಅಭ್ಯರ್ಥಿಗಳ ವಯೋಮಿತಿಯನ್ನು 10 ವರ್ಷ ಸಡಿಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದ ವಿಕಲಚೇತನ ಅಭ್ಯರ್ಥಿಗಳಿಗೆ 15 ವರ್ಷ, ಇತರ ಹಿಂದುಳಿದ ವರ್ಗಗಳಿಗೆ 13 ವರ್ಷ ಸಡಿಲಿಕೆ ನೀಡಲಾಗಿದೆ. ಅಭ್ಯರ್ಥಿಯ ಗರಿಷ್ಠ ವಯೋಮಿತಿ 56 ವರ್ಷಗಳಿಗೆ ನಿಗದಿಪಡಿಸಿ ಈ ಆದೇಶ ನೀಡಲಾಗಿದೆ ಎಂದು ಖಾಸಗಿ ಮತ್ತು ತರಬೇತಿ ಇಲಾಖೆ ತಿಳಿಸಿದೆ.

ಇದು ಕೇಂದ್ರ ಸರ್ಕಾರದ ನಾಗರಿಕ ಸೇವಾ ಆಯೋಗದ ಪರೀಕ್ಷೆಗಳಿಗೆ ಅನ್ವಯವಾಗುವುದಿಲ್ಲ. ಇದುವರೆಗೆ ವಿಕಲಚೇತನ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿತ್ತು.

No Comments

Leave A Comment