Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಲೋಕಾ ಡೀಲ್ ಪ್ರಕರಣ; ತನಿಖೆಗೆ ಹೈಕೋರ್ಟ್ ತಡೆ

baskar2ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾಗಿರುವ ಭೃಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ  ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಹೈಕೋರ್ಟ್‌  ಬುಧವಾರ ತಡೆ ನೀಡಿದೆ.

 ಪ್ರಕಣದ ಆರೋಪಿಯಾಗಿರುವ ಅಶ್ವಿ‌ನ್‌ ರಾವ್‌ (ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ ವೈ. ಭಾಸ್ಕರ್‌ ರಾವ್‌ ಅವರ ಪುತ್ರ) ಅವರು ಲೋಕಾಯುಕ್ತ ಪೊಲೀಸರ ತನಿಖೆಗೆ ತಡೆ ನೀಡಬೇಕೆಂದು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ  ಬುಧವಾರ ತರಾತುರಿಯಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಕೂಡಲೇ ಕೈಗೆತ್ತಿಕೊಂಡ ಕೋರ್ಟ್‌ ಎಸ್ಐಟಿ ನಡೆಯುತ್ತಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವ ಅಗತ್ಯವಿಲ್ಲ ಎಂದಿದೆ.

ಅರ್ಜಿಯಲ್ಲಿ ಪ್ರಕಣಕ್ಕೆ ಸಂಬಂಧಿಸಿ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗುತ್ತಿದೆ,ಹೀಗಾಗಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವ ಅಗತ್ಯವಿಲ್ಲ, ತನಿಖೆಗೆ ತಡೆ ನೀಡಬೇಕು ಎಂದು ಅಶ್ವಿ‌ನ್‌ ರಾವ್‌ ಮನವಿ ಮಾಡಿದ್ದರು.

ಪ್ರಕರಣದ ತನಿಖೆಗೆ ರಾಜ್ಯ ಸರಕಾರವು ಕಾರಾಗೃಹ ಇಲಾಖೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಕಮಲ್‌ ಪಂತ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಈ ಮಧ್ಯೆ, ಉಪಲೋಕಾಯುಕ್ತ ಸುಭಾಷ್‌ ಬಿ.ಅಡಿ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್‌ ಅವರಿಗೆ ನಿರ್ದೇಶನ ನೀಡಿ ಮತ್ತೂಮ್ಮೆ ಆದೇಶ ಹೊರಡಿಸಿದ್ದರು . ಇದರಿಂದಾಗಿ ಅಶ್ವಿ‌ನ್‌ ರಾವ್‌ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಬೇಕಾಗಿತ್ತು.

ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಈ ಕುರಿತು ತನಿಖೆ ನಡೆಸಲು ಎಡಿಜಿಪಿ ಶ್ರೇಣಿಗಿಂತ ಕಡಿಮೆ ಇಲ್ಲದ ಅಧಿಕಾರಿ ನೇತೃತ್ವದ ತನಿಖಾ ತಂಡ ರಚಿಸುವಂತೆ ಲೋಕಾ ಯುಕ್ತ ನ್ಯಾ. ವೈ.ಭಾಸ್ಕರ್‌ ರಾವ್‌ ಸರಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರಕಾರ ಕಮಲ್‌ ಪಂತ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ.

No Comments

Leave A Comment