Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮದ್ರಾಸ ಶಾಲೆಯ ಮಕ್ಕಳಿಗೆ ಮಾನ್ಯತೆ ಇಲ್ಲ: ಮಹಾರಾಷ್ಟ್ರ ಸರ್ಕಾರ

maha-newಮುಂಬಯಿ: ಗೋಮಾಂಸ ನಿಷೇಧ ಮಾಡಿ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಮಹಾರಾಷ್ಟ್ರ ಸರ್ಕಾರ ಮತ್ತೊಂದು ವಿವಾದಾತ್ಮಕ ನಿರ್ಧಾರ ಜಾರಿಗೆ ತರಲು ಮುಂದಾಗಿದೆ.

ಮದ್ರಾಸಗಳಿಗೆ ಶಾಲೆಯ ಮಾನ್ಯತೆ ಇಲ್ಲ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಮದ್ರಸಾದಲ್ಲಿ ಕಲಿಯುವ ಮಕ್ಕಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ, ಅವರನ್ನು ಶಾಲೆ ಬಿಟ್ಟ ಮಕ್ಕಳೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಮದ್ರಾಸ ದಲ್ಲಿ ಕಲಿಯುವ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ನಿರ್ಧರಿಸಿರುವುದಾಗಿ ಹೇಳಿರುವ ಮಹಾರಾಷ್ಟ್ರ ಸರ್ಕಾರ ಮದ್ರಾಸಗಳ ಮಾನ್ಯತೆ ರದ್ದು ಪಡಿಸಲು ಮುಂದಾಗಿದೆ.

ಮಹಾರಾಷ್ಟ್ರದಲ್ಲಿ ಸುಮಾರು 2000 ಮದ್ರಾಸಗಳಿದ್ದು, ಅದರಲ್ಲಿ 1.5 ಲಕ್ಷ ಮಕ್ಕಳು ಕಲಿಯುತ್ತಿದ್ದಾರೆ 2013 ಸಮೀಕ್ಷೆ ತಿಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದು, ವಿಧಾನಸಭೆಯಲ್ಲಿ ಈ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್ ವಕ್ತಾರ ಸಂಜಯ್ ನಿರುಪಮ್ ತಿಳಿಸಿದ್ದಾರೆ.

ಇನ್ನು ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿದ್ದು, ಇದೊಂದು ಅಸಂವಿಧಾನಿಕ ನಿರ್ಧಾರ, ಇದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಜಮೈತ್ – ಉಲೆಮಾ-ಇ-ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮದ್ ಮದನಿ ಹೇಳಿದ್ದಾರೆ.

No Comments

Leave A Comment