Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಲೋಕಾ ಪದಚ್ಯುತಿಗೆ 57 ಶಾಸಕರ ಸಹಿ ;ಸ್ಪೀಕರ್ ಗೆ ಪ್ರಸ್ತಾವನೆ ಸಲ್ಲಿಕೆ

Suvarna-Soudaಬೆಳಗಾವಿ: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ.ವೈ.ಭಾಸ್ಕರ ರಾವ್ ಅವರನ್ನು ಪದಚ್ಯುತಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ನ 57 ಶಾಸಕರ ಸಹಿಯುಳ್ಳ ಪ್ರಸ್ತಾವನೆಯನ್ನು ಶುಕ್ರವಾರ ಸ್ಪೀಕರ್ ಕಾಗೋಡು ತಿಮ್ಮಪ್ಪನವರಿಗೆ ಸಲ್ಲಿಸಿದೆ.

ಸ್ಪೀಕರ್ ಕಾಗೋಡು ತಿಮ್ಮಪ್ಪನವರ ಕೊಠಡಿಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಜೆಡಿಎಸ್ ನ ವೈಎಸ್ ವಿ ದತ್ತಾ ನೇತೃತ್ವದಲ್ಲಿ ತೆರಳಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಾನೂನು ತಿದ್ದುಪಡಿ, ಲೋಕಾಯುಕ್ತರ ಪದಚ್ಯುತಿಗೆ ಆಗ್ರಹಿಸಿ ಸ್ಪೀಕರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅಲ್ಲದೇ ಈ ಬಗ್ಗೆ ಚರ್ಚಿಸಲು ಸೋಮವಾರ ಅವಕಾಶ ನೀಡಬೇಕೆಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಸೋಮವಾರ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿರುವುದಾಗಿ ಪ್ರಸ್ತಾವನೆ ಸಲ್ಲಿಕೆ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಲೋಕಾಯುಕ್ತರ ಪದಚ್ಯುತಿ ವಿಚಾರದಲ್ಲಿ ಒಗ್ಗೂಡಿರುವ ಪ್ರತಿಪಕ್ಷಗಳು, ಗುರುವಾರ ವಿಧಾನಪರಿಷತ್ತಿನಲ್ಲಿ ಸದಸ್ಯರ ಸಹಿ ಸಂಗ್ರಹಿಸಿ ಪದಚ್ಯುತಿಗೆ ನಿರ್ಣಯಕ್ಕೆ ಅವಕಾಶ ಕೋರಿ ಸಭಾಪತಿಗಳಿಗೆ ನೋಟಿಸ್ ನೀಡಿದ್ದವು.

ಲೋಕಾಯುಕ್ತರ ಕಚೇರಿ ಮುತ್ತಿಗೆಗೆ ಕರವೇ ಯತ್ನ:
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿಎ ನಾರಾಯಣಗೌಡ ನೇತೃತತ್ವದ ಬಣ ಶುಕ್ರವಾರ ಲೋಕಾಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತು. ಆದರೆ ಮುಂಜಾಗ್ರತಾ ಕ್ರಮವಾಗಿ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಫ್ರೀಡಂಪಾರ್ಕ್ ಬಳಿಯೇ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

No Comments

Leave A Comment