Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಬಿಬಿಎಂಪಿ ಎಲೆಕ್ಷನ್; ರಾಜ್ಯಕ್ಕೆ 8 ವಾರಗಳ ಗಡುವು ನೀಡಿದ ಸುಪ್ರೀಂ

supremeನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆ ಮತ್ತು ಹೊಸ ಮೀಸಲಾತಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರ(ಬಿಬಿಎಂಪಿ ಎಲೆಕ್ಷನ್; ಸುಪ್ರೀಂಕೋರ್ಟ್ ಲ್ಲಿ ಇಂದು ವಿಚಾರಣೆ)ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್ , ಬಿಬಿಎಂಪಿ ಚುನಾವಣೆ ನಡೆಸಲು 8 ವಾರಗಳ ಗಡುವು ನೀಡಿದ್ದು, ಹಳೇ ಮೀಸಲಾತಿ ಅನ್ವಯವೇ ಚುನಾವಣೆ ನಡೆಸಲು ಸೂಚಿಸಿದೆ.

ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅಲ್ಲದೇ 2011ರ ಜನಗಣತಿ ಪ್ರಕಾರ ಮೀಸಲು ನಿಗದಿ, ಕ್ಷೇತ್ರ ಪುನರ್ ವಿಂಗಡಣೆಗೆ ಅವಕಾಶ ಕೊಡುವಂತೆ ಕೋರಿತ್ತು.

ಆದರೆ ರಾಜ್ಯಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಪೀಠದ ಮುಖ್ಯ ನ್ಯಾಯಾಧೀಶರಾದ ಎಚ್.ಎಲ್.ದತ್ತು ಅವರು, 8 (2ತಿಂಗಳು) ವಾರಗಳ ಕಾಲ ಚುನಾವಣೆ ಮುಂದೂಡಿ ಆದೇಶ ನೀಡಿದ್ದಾರೆ. ಆದರೆ ಕ್ಷೇತ್ರ ಪುನರ್ ವಿಂಗಡಣೆಯಾಗಲಿ, ಹೊಸ ಮೀಸಲಾತಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಹಳೇ ಮೀಸಲಾತಿ ಅನ್ವಯವೇ ಚುನಾವಣೆ ನಡೆಸುವಂತೆ ಸುಪ್ರೀಂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕ್ಷೇತ್ರ ಪುನರ್ ವಿಂಗಡಣೆ, ಹೊಸ ಮೀಸಲಾತಿ ಕುರಿತ ವಾದ ಮಂಡನೆಯನ್ನು ಸುಪ್ರೀಂ ಪೀಠ ತಳ್ಳಿಹಾಕಿದೆ.

No Comments

Leave A Comment