Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

IMG-20150702-WA0018ಮಣಿಪಾಲ: ಬುಧವಾರ ವೈದ್ಯ ದಿನಾಚರಣೆಯ ಅಂಗವಾಗಿ ಮುನಿಯಾಲು ಆಯುರ್ವೇದ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸಂಸ್ಥೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಆ ಪ್ರಯುಕ್ತ ಬೆಳಗ್ಗೆ ೯.೦೦ ರಿಂದ ಮಧ್ಯಾಹ್ನ ೧೨.೦೦ರವರೆಗೆ ಮಣಿಪಾಲದ ವಿವಿಧ ಸ್ಥಳಗಳಲ್ಲಿ ಸುಮಾರು ೪೦೦ಕ್ಕೂ ಅಧಿಕ ಜನರ ಆರೋಗ್ಯ ಸ್ಥಿತಿಯ ಸಮೀಕ್ಷೆ ಮಾಡಲಾಯಿತು.

ಮಧ್ಯಾಹ್ನ ೩.೦೦ ಕ್ಕೆ ರಾಷ್ಟ್ರೀಯ ಸೇವಾ ಯೋಜನೆಯ ಆರೋಗ್ಯ ಘಟಕ ಜೀವಾಮೃತಂ ನ ಉದ್ಘಾಟನೆ ನೆರವೇರಿಸಲಾಯಿತು. ಪ್ರಾಂಶುಪಾಲರಾದ ಡಾ. ಸತ್ಯನಾರಾಯಣರವರು ವೈದ್ಯರ ದಿನದ ಪ್ರಾಮುಖ್ಯತೆಯನ್ನು ತಿಳಿಸಿ, ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಂಸ್ಥೆಯ ಆಡಳಿತಾಧಿಕಾರಿಗಳಾದ ತಾರಾನಾಥ್ ಶೆಟ್ಟಿ , ಎಲ್ಲಾ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕುಮಾರಿ ಅನಂತಲಕ್ಷ್ಮಿ ಪ್ರಾರ್ಥನೆ ನೆರವೇರಿಸಿದರು, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ. ಪ್ರದೀಪ್ ಅವರು ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿ ನಾಯಕ ಸಚಿನ್ ನಿರೂಪಿಸಿದರು.

No Comments

Leave A Comment