Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಲಲಿತ್ ಮೋದಿ ವಿವಾದ; ಲಲಿತ್ ವಿರುದ್ಧ ದೂರು ದಾಖಲಿಸಿದ ರಾಷ್ಟ್ರಪತಿ ಭವನ

lalit modi

ವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕಾರ್ಯದರ್ಶಿ ಒಮಿತ್ ಪೌಲ್ ಹಣಕಾಸು ಅವ್ಯವಹಾರ ನಡೆಸಿದ್ದಾರೆಂದು ಆರೋಪಿಸಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಮಾನಹಾನಿಕರವಾಗಿ ಟ್ವೀಟ್ ಮಾಡಿದ್ದ ಹಿನ್ನೆಲೆಯಲ್ಲಿ ಲಲಿತ್ ವಿರುದ್ಧ ರಾಷ್ಟ್ರಪತಿ ಭವನ ದೆಹಲಿ ಪೊಲೀಸರಿಗೆ ದೂರು ನೀಡಿದೆ.

ಪ್ರಕರಣವನ್ನು ದೆಹಲಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮೋದಿ ವಿರುದ್ಧ ಕೇಸ್ ದಾಖಲಿಸುತ್ತಾರೋ ಅಥವಾ ಟ್ವೀಟರ್ ಪೇಜ್ ಅನ್ನು ಬ್ಲಾಕ್ ಮಾಡುವ ನಿಟ್ಟಿನಲ್ಲಿ ಕೋರ್ಟ್ ಸೂಚನೆ ಪಾಲಿಸಬೇಕೆ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಲಲಿತ್ ಮೋದಿ ಪೌಲ್ ಹೆಸರನ್ನು ಉಲ್ಲಂಘಿಸಿ ಮಾಡಿದ್ದ ಟ್ವೀಟ್ ಪೋಸ್ಟ್ ಜೊತೆಗೆ ರಾಷ್ಟ್ರಪತಿ ಭವನ್ ದೂರನ್ನು ಕಳುಹಿಸಿದೆ ಎಂದು ವರದಿ ಹೇಳಿದೆ. ಮಾನಹಾನಿಕರವಾಗಿ ಟ್ವೀಟ್ ಮಾಡುವುದು ಕ್ರಿಮಿನಲ್ ಅಪರಾಧವೇ ಎಂಬ ಬಗ್ಗೆ ದೆಹಲಿ ಪೊಲೀಸ್ ಕಮಿಷನರ್ ಬಿಎಸ್ ಬಸ್ಸಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಅಂತರ್ಜಾಲ ತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಕಟಿಸಿದರೆ ವ್ಯಕ್ತಿಯನ್ನು ಬಂಧಿಸಲು ಅವಕಾಶ ನೀಡುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎ ಅನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ತೀರ್ಪು ನೀಡಿತ್ತು. ಹಾಗಾಗಿ ಮೋದಿ ಪ್ರಕರಣದಲ್ಲಿ ಬೇರೆ ಯಾವ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಳ್ಳಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

No Comments

Leave A Comment