Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಗ್ರಾ.ಪಂ.ನಿಂದ ಸಂಸತ್‌ ವರೆಗೆ ಬಿಜೆಪಿ ಸರ್ಕಾರ ರಚನೆ ನಮ್ಮ ಗುರಿ: ಶಾ

2_18
ಬೆಂಗಳೂರು :
 ಭಾರತದಲ್ಲಿ ತಳಮಟ್ಟದ ಗ್ರಾಮ ಪಂಚಾಯತ್‌ನಿಂದ ಹಿಡಿದು ಸಂಸತ್‌ ವರೆಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

ಬಿಜೆಪಿ ಪಕ್ಷದ ಬಲವರ್ಧನೆಗಾಗಿ  ಅರಮನೆ ಮೈದಾನದಲ್ಲಿನ ಗಾಯತ್ರಿ ವಿಹಾರ ಸಭಾಂಗಣದಲ್ಲಿ ನಡೆದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಬಳಿಕ ಮಹಾಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ 3 ಹಂತದ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಕರ್ನಾಟದಲ್ಲಿ 88 ಲಕ್ಷ ಮಂದಿಯನ್ನು ಸದಸ್ಯರನ್ನಾಗಿ ಮಾಡಲಾಗಿದ್ದು,ದೇಶದಲ್ಲಿ 11 ಕೋಟಿಗೂ ಹೆಚ್ಚು ಸದಸತ್ವ ನೋಂದಣಿಯಾಗಿದೆ ಎಂದರು.

ಸಂಘಟನಾತ್ಮಕವಾಗಿ ಕೆಲಸ ಮಾಡುವ ಮೂಲಕ ಪಶ್ಚಿಮ ಬಂಗಾಳ, ಒರಿಸ್ಸಾ, ಅಸ್ಸಾಂ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ ಪಕ್ಷ ವನ್ನು ಅಧಿಕಾರಕ್ಕೇರಿಸುವ ಮಹತ್ವದ ಗುರಿ ನಮ್ಮ ಮುಂದಿದೆ ಎಂದು ಶಾ ಹೇಳಿದರು.

ಬಿಜೆಪಿ ನೇತ್ರತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ 12 ತಿಂಗಳಲ್ಲಿ 24 ಜನಪರ ಯೋಜನೆಗಳನ್ನು ಜಾರಿ ಮಾಡಿದ್ದು,ಈ ಯೋಜನೆಗಳಲ್ಲಿ  ಕಾರ್ಯಕರ್ತರಾದ ನೀವು ಸರ್ಕಾರದೊಂದಿಗೆ ಕೈ ಜೋಡಿಸಿ ಜನರಿಗೆ ತಲುಪುವವಲ್ಲಿ ನೆರವಾಗಬೇಕು. ಯಾವುದೇ ಕಾರಣಕ್ಕೂ ಜನರಲ್ಲಿ ನಿರಾಶದಾಯಕ ಪ್ರತಿಕ್ರಿಯೆ ಬರಲು ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು.

ಶಾ ನೇತೃತ್ವದಲ್ಲಿ ರವಿವಾರ ಇಡೀ ದಿನ ವಿವಿಧ ಸಭೆಗಳು ನಡೆದವು. ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರು , ಶಾಸಕರು ,ಸಂಸದರು ಪಾಲ್ಗೊಂಡಿದ್ದರು.

No Comments

Leave A Comment