Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮೃತ ಬಾಲಕಿ ತಂದೆ ಟ್ರಾಫಿಕ್ ನಿಯಮ ಪಾಲಿಸಬೇಕಿತ್ತು: ಹೇಮಮಾಲಿನಿ ಟ್ವೀಟ್

hema-maliniಮುಂಬಯಿ: ಕಾರು ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನೀತಿ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಟ್ವೀಟ್ ಮಾಡಿದ್ದಾರೆ.

ಮೃತ ಬಾಲಕಿ ಸಾವಿಗೆ ಸಂತಾಪ ಸೂಚಿಸಿರುವ ನಟಿ ಬಾಲಕಿಯ ತಂದೆ ನಿಯಮಗಳನ್ನು ಪಾಲಿಸಿದಿದ್ದರೆ ಕಾರು ಅಪಘಾತ ತಪ್ಪಿಸಬಹುದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

(Contd) How I wish the girl’s father had followed the traffic rules – thn this accident could have been averted & the lil one’s life safe!

ತಮಗೆ ಅಪಘಾತವಾದ ನಂತರ ಭಾರತ ಮತ್ತು ಪ್ರಪಂಚದಾದ್ಯಂತ ಇರುವ ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳು ತಮಗೆ ಫೋನ್ ಮಾಡಿ, ಮೆಸೇಜ್ ಮಾಡಿ ತನ್ನ ಆರೋಗ್ಯ ಕ್ಷೇಮದ ಬಗ್ಗೆ ವಿಚಾರಿಸಿದರು. ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ.

ಹೇಮಮಾಲಿನಿ ಮರ್ಸಿಡಿಸ್ ಕಾರಿನ ಚಾಲಕ ಮಹೇಶ್ ಠಾಕೂರ್ ನನ್ನ ಬಂಧಿಸಿದ ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ರಾಜಸ್ತಾನದ  ಜೈಪುರದಿಂದ 50 ಕಿಮೀ ದೂರದಲ್ಲಿರು ದೌಸಾ ಬಳಿ ಆಲ್ಟೋ ಕಾರು ಮತ್ತು ಹೇಮಮಾಲಿನಿ ಚಲಿಸುತ್ತಿದ್ದ ಮರ್ಸಿಡಿಸ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ವೇಳೆ ಆಲ್ಟೋ ಕಾರಿನಲ್ಲಿದ್ದ ಬಾಲಕಿ ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು

No Comments

Leave A Comment