Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಾಕಿ ಆತ್ಮಹತ್ಯೆಗೆ ಯತ್ನ; 3 ಮಹಿಳೆಯರ ರಕ್ಷಣೆ

sugarcane-field-fireಮಂಡ್ಯ: ಸಾಲಬಾಧೆ ತಾಳಲಾರದೆ ರಾಜ್ಯದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ದಿನಂಪ್ರತಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಯಾಗುತ್ತಲೆ ಇವೆ. ಇದೀಗ ಮಂಡ್ಯ ಎಚ್‌. ಮಲ್ಲಿಗೆರೆ ಗ್ರಾಮದಲ್ಲಿ ಮೂವರು ರೈತ ಮಹಿಳೆಯರು ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಸಾಮೂಹಿಕ ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆಸಿದೆ.

ಮಲ್ಲಿಗೆರೆ ಗ್ರಾಮದ ನಿವಾಸಿಗಳಾದ ಸುನಂದಾ, ಜಯಂತಿ ಮತ್ತು ಪಾರ್ವತಮ್ಮ ಎಂಬುವರು ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಮೂವರನ್ನು ರಕ್ಷಿಸಿದ್ದಾರೆ.

ಕಬ್ಬು ಕಟಾವಿಗೆ ಬಂದರೂ ಉತ್ತಮ ಬೆಲೆ ಸಿಗದೆ ಬೆಳೆ ಒಣಗಿ ಹೋಗುತ್ತಿದ್ದು, ಇನ್ನೊಂಡೆದೆ ಸಾಲಗಾರರ ಕಾಟದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮಸ್ಥರು ಕೂಡಲೆ ರಕ್ಷಣೆ ಮಾಡಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಬ್ಬು ಬೆಳೆಗೆ ಬೆಂಕಿ ಹಾಕಿದ್ದರಿಂದ ಸುಮಾರು 10 ಎಕರೆಗೂ ಹೆಚ್ಚು ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ಸುದ್ದಿ ತಿಳಿಸಿದ ಕೂಡಲೆ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಕಳೆದ ಜೂನ್‌ 25ರಂದು ಸಾಲಬಾಧೆ ತಾಳಲಾರದೆ ತನ್ನ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ರೈತ ನಂಜೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು.

No Comments

Leave A Comment