Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ವೀರಾಜಪೇಟೆ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಓರ್ವ ಮಹಿಳೆ ಮೃತ್ಯು

elifahntವೀರಾಜಪೇಟೆ, ಜು. 8: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.

ಕಮಲಾ (50) ಮೃತ ಪಟ್ಟವರಾಗಿದ್ದು, ವಸಂತಿ (30), ಗಂಭೀರ ಗಾಯಗೊಂಡವರಾಗಿದ್ದಾರೆ. ಇಂದು ಬೆಳಗ್ಗೆ ಮಹಿಳೆಯರಿಬ್ಬರು ಸಿದ್ಧಾಪುರದ ಬಳಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಕಮಲಾ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಇನ್ನೋರ್ವ ಮಹಿಳೆಯನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

No Comments

Leave A Comment