Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಸಿದ್ದರಾಮಯ್ಯ ವಿರುದ್ಧ ಸಚಿವ ಅಂಬಿ ಮುನಿಸು; ಅಸಮಾಧಾನ ಸ್ಫೋಟ

Ambareesh1 (1)ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಶುಕ್ರವಾರ ತೆರೆ ಬೀಳುವ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಅಂಬರೀಶ್ ನಡುವಿನ ಅಸಮಾಧಾನ ಸ್ಫೋಟಗೊಂಡಿದೆ. ಮಂಡ್ಯ ರಾಜಕೀಯ ವಿಷಯದಲ್ಲಿ ನೀವು ನನ್ನನ್ನು ನಿರ್ಲಕ್ಷಿಸಿದ್ದೀರಿ ಎಂದು ಸಚಿವ ಅಂಬರೀಶ್ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಮನವಿಗೆ ನೀವು ಯಾವುದೇ ರೀತಿಯಲ್ಲೂ ಸಹಕರಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಬುಧವಾರ ಸಂಜೆ ಅಂಬರೀಶ್ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಅಂಬರೀಶ್ ಅವರು ಸಿಎಂಗೆ ಪತ್ರ ನೀಡಿ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದರ ವರದಿ ತಿಳಿಸಿದೆ.

No Comments

Leave A Comment