Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಆಪ್ ಶಾಸಕ ಮನೋಜ್ ಕುಮಾರ್ ಅರೆಸ್ಟ್ ; ಕೇಜ್ರಿಗೆ ಮತ್ತಷ್ಟು ಸಂಕಷ್ಟ

manoj-kumar-aapನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಶಾಸಕ ಮನೋಜ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಪಕ್ಷದಲ್ಲಿನ ಹಲವು ವಿವಾದಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ದೆಹಲಿಯ ಕೊಂಡ್ಲಿ ಕ್ಷೇತ್ರದ ಶಾಸಕ ಮನೋಜ್ ಕುಮಾರ್ ವಿರುದ್ಧ ಮೋಸ, ಮಹಿಳೆ ಜೊತೆ ಅಸಭ್ಯ ವರ್ತನೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಕೆಲವು ತಿಂಗಳ ಹಿಂದೆ ಹಲ್ಲೆ ನಡೆಸಿದ ಪ್ರಕರಣವೊಂದನ್ನು ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ.

ಆದರೆ ಶಾಸಕ ಮನೋಜ್ ಕುಮಾರ್ ಅವರನ್ನು ಯಾವ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಮನೋಜ್ ಕುಮಾರ್ ಅವರನ್ನು ಅಶೋಕ್ ನಗರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment