Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮನೆಗೆ ಬೆಂಕಿ: ಮಹಿಳೆಯ ಸಾವು

FIREಇಟಾ, ಉತ್ತರ ಪ್ರದೇಶ: ಅಡುಗೆ ಮಾಡುತ್ತಿದ್ದ ವೇಳೆ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡು ಮನೆಗೆ ಬೆಂಕಿ ಹತ್ತಿಕೊಂಡ ಪ್ರಯುಕ್ತ 30 ವರ್ಷದ ಮಹಿಳೆಯು ಮೃತ ಪಟ್ಟ ಘಟನೆ ಸೋಹಾರ್‌ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಸೀತಾದೇವಿಯು ಎಂದಿನಂತೆ ತನ್ನ ಮನೆಯಲ್ಲಿ ಅಡುಗೆ ಕೆಲಸದಲ್ಲಿ ನಿರತಳಾಗಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ. ಅಗ್ನಿ ಅನಾಹುತ ಘಟಿಸಿದೊಡನೆಯೇ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ. ಆದರೆ ಸೀತಾದೇವಿ ಆಗಲೇ ಸುಟ್ಟ ಕರಕಲಾಗಿದ್ದರು.

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

No Comments

Leave A Comment