Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ವ್ಯಾಪಂ ಹಗರಣ ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

vyapam-SC

ನವದೆಹಲಿ: ಮಧ್ಯಪ್ರದೇಶದ ಕುಖ್ಯಾತ ವ್ಯಾಪಂ (ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಗುರುವಾರ ಸುಪ್ರೀಂಕೋರ್ಟ್ ಪುರಸ್ಕರಿಸಿ, ನಿಗೂಢ ಸಾವಿನ ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ನೀಡಿದೆ.

ಪ್ರಕರಣವನ್ನು ಈಗಾಗಲೇ ಎಸ್ಐಟಿ ನಡೆಸುತ್ತಿದ್ದು, ಇದೀಗ ಪ್ರಕರಣದ ಎಲ್ಲಾ ತನಿಖೆಯನ್ನು ಸಿಬಿಐಗೆ ಸುಪ್ರಿಂಕೋರ್ಟ್ ವರ್ಗಾಯಿಸಿದಂತಾಗಿದೆ.

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ ನಿಗೂಢ ಸಾವಿನ ಬಹುಕೋಟಿ ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮಧ್ಯಪ್ರದೇಶ ಸರ್ಕಾರ, ಕಾಂಗ್ರೆಸ್ ಮುಖಂಡ ಸೇರಿದಂತೆ ಐವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ವಿಭಾಗೀಯ ಪೀಠದ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಮಹತ್ವದ ಆದೇಶ ನೀಡಿದ್ದಾರೆ. ಅಲ್ಲದೇ ಮಧ್ಯಪ್ರದೇಶ ರಾಜ್ಯಪಾಲ, ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳೊಳಗೆ ಉತ್ತರನೀಡುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.

ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೋರಿದ್ದ ಮಧ್ಯಪ್ರದೇಶ ಸರ್ಕಾರದ ಅರ್ಜಿಯನ್ನು ಸದ್ಯಕ್ಕೆ ಪರಿಗಣಿಸಲು ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ನಿರಾಕರಿಸಿತ್ತು. ಪ್ರಕರಣದ ವಿಚಾರಣೆ ಜು.9ರಂದು ಸುಪ್ರೀಂನಲ್ಲಿ ನಡೆಯಲಿದೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ವಿಚಾರಣೆ ನಡೆಸದೇ, ಜುಲೈ 20ಕ್ಕೆ ಮುಂದೂಡಿತ್ತು.

 

No Comments

Leave A Comment