Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು

Lowyers-protestಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು.

ಭ್ರಷ್ಟಾಚಾರ ನಿಯಂತ್ರಿಸುವ ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ನಡೆದಿದ್ದು,ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ನಿನ್ ರಾವ್ ಅವರು ಲೋಕಾಯುಕ್ತ ಕಚೇರಿಯಲ್ಲಿ ಮತ್ತು ಲೋಕಾಯುಕ್ತ ನಿವಾಸದಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡಿದ್ದಾರೆ. ಈ ಕುರಿತಂತೆ ವಕೀಲರ ಸಂಘ ಪ್ರತಿಭಟನೆ ನಡೆಸುತ್ತಿದ್ದರೂ ಭಾಸ್ಕರ್ ರಾವ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ಏನೂ ತಿಳಿಯದಂತಿದ್ದಾರೆ. ಹೀಗಾಗಿ ರಾಜ್ಯಪಾಲರು ಕೂಡಲೇ ಪ್ರಕರಣ ಸಂಬಂಧ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ವಕೀಲರ ಸಂಘ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ರಾಜೀನಾಮೆ ನೀಡಬೇಕು ಆಗ್ರಹಿಸಿದ್ದು, ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಒತ್ತಾಯಿಸಿದೆ.

No Comments

Leave A Comment