Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಪರಿಷತ್ತಿನಲ್ಲಿ ಗೃಹ ಸಚಿವ ಜಾರ್ಜ್ ಹೇಳಿಕೆ ಪೊಲೀಸರಿಗೆ 3 ವರ್ಷದಲ್ಲಿ 11 ಸಾವಿರ ಮನೆ

jpkಸುವರ್ಣ ವಿಧಾನಸೌಧ, ಬೆಳಗಾವಿ: 2020ರ ಪೊಲೀಸ್ ಕ್ವಾಟರ್ಸ್‌ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 11 ಸಾವಿರ ಮನೆಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ತಿಳಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯೆ ಜಯಮ್ಮ ಅವರ ಪ್ರಶ್ನೆಗೆ ಪರಿಷತ್ತಿನಲ್ಲಿ ಉತ್ತರಿಸಿದ ಅವರು, ರಾಜ್ಯದಲ್ಲಿ 45 ಸಾವಿರದ 588 ಕಾನ್‌ಸ್ಟೇಬಲ್‌ಗಳಿದ್ದಾರೆ ಎಂದರು.

ಈ ವರ್ಷ ಪೊಲೀಸ್ ಕ್ವಾಟರ್ಸ್‌ ನಿರ್ಮಾಣಕ್ಕೆ ಬಜೆಟ್‌ನಲ್ಲಿ ತೆಗೆದಿರಿಸಲಾದ 276.58 ಕೋಟಿ ರೂಪಾಯಿಗಳಲ್ಲಿ 92.19 ಕೋಟಿ ರೂಪಾಯಿ ಹಣವನ್ನು ಈವರೆಗೂ ವೆಚ್ಚ ಮಾಡಲಾಗಿದೆ. ಪ್ರತಿಯೊಬ್ಬ ಪೊಲೀಸ್ ಕಾನ್‌ಸ್ಟೇಬಲ್‌ಗೆ ಒಂದು ಮನೆ ಮಂಜೂರು ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

No Comments

Leave A Comment