Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮಂದಿ ಸಾವು ವರುಣನ ಆರ್ಭಟಕ್ಕೆ ಉತ್ತರ ಭಾರತ ತತ್ತರ-15 ಮಂದಿ ಸಾವು

15swa Rainನವದೆಹಲಿ (ಪಿಟಿಐ): ಉತ್ತರಭಾರತದಲ್ಲಿ ಸುರಿಯುತ್ತಿರುವ  ಧಾರಾಕಾರ ಮಳೆಗೆ 15 ಮಂದಿ ಸಾವನ್ನಪ್ಪಿದ್ದು,  ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉತ್ತರ ಪ್ರದೇಶದಲ್ಲಿ ಮನೆ ಕುಸಿದು ಹೆಣ್ಣು ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ.

ಕಾಶ್ಮೀರದಲ್ಲಿ ಉಂಟಾದ ಭೂ ಕುಸಿತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಲ್ಲಿ ಭಾರಿ ಮಳೆಗೆ ನಿರ್ಮಾಣವಾಗುತ್ತಿರುವ ಕಟ್ಟಡವೊಂದು ಕುಸಿದು ಇಬ್ಬರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ದೆಹಲಿಯಲ್ಲಿ ನಾಲ್ಕನೇ ದಿನವೂ ಮಳೆಯ ಆರ್ಭಟ ಮುಂದುವರಿದ್ದು ರಾಜಧಾನಿ ಸ್ತಬ್ಧವಾಗಿದೆ. ಅನೇಕ ಭಾಗಗಳು ನೀರಿನಿಂದ ಆವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಸ್ತೆಗಳು ಕೆರೆಯಂತಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಶನಿವಾರದವರೆಗೆ ದೆಹಲಿಯಲ್ಲಿ 147.8 ಮಿ.ಮೀ ಮಳೆ ಬಿದ್ದಿದೆ. ಪಾಲಂ ಪ್ರದೇಶದಲ್ಲಿ  98.4 ಮಿ.ಮೀ ಮಳೆ ದಾಖಲಾಗಿದೆ. ಮಳೆಗೆ ಉತ್ತರಭಾರತದ ನಾನಾ ರಾಜ್ಯಗಳಲ್ಲಿ ಕಟ್ಟಡ ಕುಸಿದು ಅನೇಕರು ಸಾವನ್ನಪ್ಪಿದ್ದಾರೆ.

ಯಾತ್ರೆಗೆ ಅಡ್ಡಿ: ಉತ್ತರಾಖಂಡದಲ್ಲಿ ಮಳೆಗೆ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೆರಳುತ್ತಿರುವ ಯಾತ್ರಾರ್ಥಿಗಳಿಗೆ ತೊಂದರೆಯಾಗಿದೆ. ಐದು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಯಾತ್ರಾರ್ಥಿಗಳಿಗೆ ತೊಂದರೆಯಾಗಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಮರನಾಥಕ್ಕೆ ತೆರಳುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ.

No Comments

Leave A Comment