Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳ ಶೀಘ್ರ ಪರಿಹಾರ : ಪ್ರಮೋದ್

dpಉಡುಪಿ:ಕಂದಾಯ ಇಲಾಖೆಯಲ್ಲಿನ ಹಲವಾರು ಸಮಸ್ಯೆಗಳನ್ನು ಆದ್ಯತಾ ನೆಲೆಯಲ್ಲಿ ಪರಿಶೀಲಿಸಿ, ಶೀಘ್ರ ಪರಿಹಾರಕ್ಕೆ ಚಾಲನೆ ನೀಡಿದೆ. ಕಾನೂನಿನ ಚೌಕಟ್ಟಿನೊಳಗೆ ಸಮಸ್ಯೆ ಪರಿಹಾರ ಕಾಣುವಾಗ ವಿಳಂಬ ಸಹಜ ಎಂದು ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ಹೇಳಿದರು.

ಸುಪ್ರೀಂ ಕೋರ್ಟಿನ ಆದೇಶದಂತೆ ಮಳೆಗಾಲದಲ್ಲಿ ಸಿ‌ಆರ್‌ಝಡ್ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ನಿಷೇದ ಹೇರಲಾಗಿದ್ದು, ಇದರಿಂದ ಆಗುತ್ತಿರುವ ಸಾಧಕ-ಭಾಧಕಗಳನ್ನು ಪರಾಮರ್ಶಿಸಿ ಜನಾಭಿಪ್ರಾಯ ಕ್ರೋಢೀಕರಿಸಿ ಶೀಘ್ರ ಪರಿಹಾರ ಕೈಗೊಳ್ಳಲಾಗುವುದು. ಇನ್ನು ಕೆಲವೇ ತಿಂಗಳುಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಆಗಮಿಸಲಿದ್ದು, ಪಕ್ಷವನ್ನು ಸಂಘಟಿಸುವಲ್ಲಿ ನಾವು ಕಾರ್ಯೋನ್ಮುಖರಾಗಬೇಕಾಗಿದೆ. ಕೇಂದ್ರ ಸರಕಾರದ ಹಗರಣ ಮತ್ತು ವೈಫಲ್ಯಗಳನ್ನು ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವುದರೊಂದಿಗೆ, ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ, ಸಮಸ್ಯೆಗಳನ್ನು ಪರಿಹರಿಸಲು ಯುವ ಕಾರ್ಯಕರ್ತರ ಪಡೆಗಳನ್ನು ಸಜ್ಜುಗೊಳಿಸಲಾಗುವುದು ಎಂದರು.

ನಗರಸಭಾಧ್ಯಕ್ಷ ಯುವರಾಜ್ ಮಾತನಾಡಿ ನಗರಸಭೆ ವ್ಯಾಪ್ತಿಯ ತೆರಿಗೆ ಪಾವತಿದಾರರಿಗೆ ಅನುಕೂಲವಾಗುವಂತೆ, ಪಾವತಿಸುವ ವಿಧಾನವನ್ನು ಸರಳೀಕರಣಗೊಳಿಸುವ ಯೋಜನೆ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಪ್ರತೀ ವಾರ್ಡ್‌ಗಳಲ್ಲಿ ಅಧಿಕಾರಿಗಳ ಉಪಸ್ಥಿಯಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಕೇಶವ ಎಂ. ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶಬ್ಬೀರ್ ಅಹ್ಮದ್, ನಗರಸಭಾ ಸದಸ್ಯರುಗಳಾದ ರಮೇಶ್ ಕಾಂಚನ್, ಮೀನಾಕ್ಷಿ ಮಾಧವ ಬನ್ನಂಜೆ, ಸೆಲಿನ್ ಕರ್ಕಡ, ಗೀತಾ ಶೇಟ್ ಹಾಗೂ ಪಕ್ಷದ ಮುಖಂಡರಾದ ಬಿ.ಪಿ. ರಮೇಶ್ ಪೂಜಾರಿ, ಅಬ್ದುಲ್ ರಹಿಮಾನ್, ಅಮೃತ್ ಶೆಣೈ, ಜಯಾನಂದ, ವಿಕಾಸ್ ಶೆಟ್ಟಿ, ಸುಜಯ ಪೂಜಾರಿ, ಗಣೇಶ್ ನೆರ್ಗಿ, ಪ್ರಖ್ಯಾತ್ ಶೆಟ್ಟಿ, ಕೆ. ಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಕೆ. ಜನಾರ್ಧನ ಭಂಡಾರ್ಕರ್ ಕಾರ್ಯಕ್ರಮ ನಿರ್ವಹಿಸಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.

No Comments

Leave A Comment