Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ದೆಹಲಿ ಶಾಲೆಯೊಂದರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳ ಅಸಹಜ ಸಾವು

murderನವದೆಹಲಿ: ದೆಹಲಿಯ ಶಾಲೆಯೊಂದರ ಇಬ್ಬರು ಭದ್ರತಾ ಸಿಬ್ಬಂದಿಗಳು ಅಸಹಜವಾಗಿ ಮೃತಪಟ್ಟಿರುವುದು ಬುಧವಾರ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು ೩೦ ಆಸುಪಾಸು ವಯಸ್ಸಿನ ಸಹೋದರರಾದ ಸುನಿಲ್ ಮತ್ತು ಅನಿಲ್ ಅವರ ಮೃತ ದೇಹಗಳು, ದೆಹಲಿಯ ಯುನೈಟೆಡ್ ಕ್ರಿಶ್ಚಿಯನ್ ಸೀನಿಯರ್ ಸೆಕಂಡರಿ ಶಾಲೆಯ ಆವರಣದಲ್ಲಿ ಬೆಳಗ್ಗೆ ೬ ಘಂಟೆಗೆ ಪತ್ತೆಯಾಗಿವೆ.

“ಯಾವುದೋ ತೂಕದ ವಸ್ತುವಿನಿಂದ ಅವರ ತಲೆಗೆ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ. ಹಗ್ಗ ಬಳಸಿ ಅವರ ಕೈಗಳನ್ನು ಮತ್ತು ಕಾಲುಗಳನ್ನು ಕಟ್ಟಿಹಾಕಲಾಗಿದೆ” ಎಂದಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಹೋದರರ ಮೇಲೆ ರಾತ್ರಿಯ ವೇಳೆಯಲ್ಲಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment