Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮಾಜಿ ಶಾಸಕರ ತೋಟದ ಮನೆಯಲ್ಲಿ ಗ್ಯಾಂಗ್ ರೇಪ್-ಹಾಸನದಲ್ಲಿ ಕಾಮುಕರ ಅಟ್ಟಹಾಸ

rape_hasanಹಾಸನ: ಅಪ್ರಾಪ್ತೆಯನ್ನು ಅಪಹರಿಸಿದ ನಾಲ್ವರು ಕಾಮುಕರ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜುಲೈ 7ರಂದು ನಾಲ್ವರು ಕಾಮುಕರು ಅಪ್ರಾಪ್ತೆಯನ್ನು ಅಪಹರಿಸಿದ್ದರು. ಬಳಿಕ ಆಕೆಯನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ್ದ ಕಿಡಿಗೇಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.

ಮಾಜಿ ಶಾಸಕ ಬಿ.ಡಿ ಬಸವರಾಜ್ ತೋಟದ ಮನೆಯಲ್ಲಿ ಕೂಡಿ ಹಾಕಿ, ನಾಲ್ಕು ದಿನ ನಿತ್ಯ ಅತ್ಯಾಚಾರವೆಸಗಿದ್ದು, ಬಳಿಕ ಆಕೆಯ ಮನೆ ಬಳಿ ತಂದುಬಿಟ್ಟಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಬಾಲಕಿ ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಬಸವರಾಜ್ ಅವರ ತೋಟದ ಮನೆಯ ಮ್ಯಾನೇಜರ್ ಆಗಿದ್ದ ಲೋಕೇಶ್ ಅಲಿಯಾಸ್ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ. ಇನ್ನೂ ಮೂವರು ಆರೋಪಿಗಳು ಅದೇ ತೋಟದಲ್ಲಿ ಕೆಲಸ ಮಾಡುವ ಕೂಲಿಗಳಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment