Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಬೆಲೆಕೇರಿ ಪ್ರಕರಣ: ಜುಲೈ 20ರ ವರಗೆ ಅನಿಲ್ ಲಾಡ್ ಸಿಬಿಐ ವಶಕ್ಕೆ

anilladಬೆಂಗಳೂರು: ಬೆಲೆಕೇರಿ ಅದಿರು ರಫ್ತು ಪ್ರಕರಣಕ್ಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ.

ಇಂದು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಅನಿಲ್ ಲಾಡ್ ಅವರನ್ನು ಹಾಜರು ಪಡಿಸಲಾಗಿತ್ತು. ಅನಿಲ್ ಲಾಡ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಬೇಕಾಗಿದ್ದು, ಅವರನ್ನು ತಮ್ಮ ವಶಕ್ಕೆ ನೀಡಬೇಕೆಂದು ಸಿಬಿಐ ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 20ರವರೆಗೆ ಅನಿಲ್ ಲಾಡ್ ಅವರನ್ನು ಸಿಬಿಐ ಕಸ್ಟಡಿಗೆ ನೀಡಿದೆ.

2010ರಲ್ಲಿ ಅನಿಲ್ ಲಾಡ್ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಗೆ 15 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ತನಿಖಾಧಿಕಾರಿಗಳು ಬಂಧಿಸಿದ್ದರು.

No Comments

Leave A Comment