Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಕೇಜ್ರಿವಾಲ್ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ, ಕಾಂಗ್ರೆಸ್

protestನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್ ಗೆ ರು.2 ಕಡಿತಗೊಳಿಸಲಾಗಿತ್ತು. ಆದರೆ ದೆಹಲಿಯಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ನ್ನು ಹೆಚ್ಚಿಸಿರೋದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ದೆಹಲಿ ಸಚಿವಾಲಯದ ಮುಂದೆ ಪ್ರತಿಭಟನೆ ಕೈಗೊಂಡಿದ್ದಾರೆ.

ಚುನಾವಣೆ ವೇಳೆ ಜನರಿಗೆ ಕೊಟ್ಟ ಮಾತನ್ನು ಆಪ್ ಸರ್ಕಾರ ಮರೆತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ದೆಹಲಿ ಸಚಿವಾಲಯಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕರರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಕೂಡ ದೆಹಲಿ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದು, ಸಿಎಂ ಅರವಿಂದ್ ಕೇಂಜ್ರಿವಾಲ್ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಿಎಂ ಮನೆಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆಹಿಡಿದಿದ್ದಾರೆ.

ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ಶೇ.20 ರಿಂದ 25ಕ್ಕೆ ಏರಿಕೆ ಮಾಡಿದ್ದು, ಡೀಸೆಲ್ ಮೇಲೆ ಶೇ.12ರಿಂದ 16ಕ್ಕೆ ವ್ಯಾಟ್ ಹೆಚ್ಚಳ ಮಾಡಿತ್ತು.

No Comments

Leave A Comment