Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಭೂ ಚರ್ಚೆ: ನೀತಿ ಸಭೆಗೆ 13 ಮುಖ್ಯಮಂತ್ರಿಗಳ ಗೈರು

niti-aayog-meetingನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ತಿಕ್ಕಾಟ ಮುಂದುವರೆದಿದೆ. ವಿಧೇಯಕಕ್ಕೆ ಸಂಬಂಧಿಸಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕರೆದಿದ್ದ ನೀತಿ ಆಯೋಗದ ಸಭೆಗೆ ಕರ್ನಾಟಕ ಸೇರಿ ಕಾಂಗ್ರೆಸ್ ಆಡಳಿತವಿರುವ ಒಂಬತ್ತು ರಾಜ್ಯಗಳು ಸೇರಿ ಒಟ್ಟು 13 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ.

ಪಶ್ಟಿಮ ಬಂಗಾಳ, ತಮಿಳುನಾಡು, ಉತ್ತರಪ್ರದೇಶ ಹಾಗೂ ಒಡಿಶಾ ರಾಜ್ಯಗಳು ಸಭೆಯನ್ನು ಬಹಿಷ್ಕರಿಸಿದ ಕಾಂಗ್ರೆಸ್ಸೇತರ ಸರ್ಕಾರವಿರುವ ರಾಜ್ಯಗಳು. ಈ ಮೂಲಕ ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ವಿಧೇಯಕವನ್ನು ಮಂಡಿಸುವ ಸರ್ಕಾರದ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾದಂತಾಗಿದೆ. ವಿಶೇಷವೆಂದರೆ ವಿಧೇಯಕದ ಕಟ್ಟಾವಿರೋಧಿಗಳಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಇವರು ಸಭೆಯಲ್ಲೇ ವಿಧೇಯಕಕ್ಕೆ ಸಂಬಂಧಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಬಿಜೆಪಿ ಮಿತ್ರಪಕ್ಷ ಅಕಾಲಿದಳದ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಕೂಡ ವಿಧೇಯಕ ದಿಂದಾಗುವ ಅಡ್ಡಪರಿಣಾಮಗಳ ಕುರಿತು ಕೇಂದ್ರವನ್ನು ಎಚ್ಚರಿಸಿದ್ದಾರೆ.

ಅಡ್ಡಪರಿಣಾಮ ಮೋದಿ: ಭೂಸ್ವಾಧೀನ ವಿಧೇಯಕ ಗ್ರಾಮೀಣ ಅಭಿವೃದ್ಧಿಗೆ ಅತ್ಯ ಗತ್ಯ. ಈ ವಿಧೇಯಕಕ್ಕೆ ಎದುರಾಗಿ ರುವ ರಾಜಕೀಯ ವಿರೋಧವು ಗ್ರಾಮೀಣಾಭಿವೃದ್ಧಿ ಮೇಲೆ ನೇರ ಪರಿಣಾಮ ಬೀಳುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ. ಜತೆಗೆ, ರೈತರ ಪ್ರಗತಿಯ ಹಾದಿಗೆ ಅಡ್ಡಿಯಾ ಗದಂತೆ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದಾರೆ.ಈ ವಿಧೇಯಕ ಜಾರಿಯಾಗದಿದ್ದರೆ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆ, ರಸ್ತೆ ಮತ್ತು ನೀರಾವರಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಬಡತನ ನಿರ್ಮೂಲನೆ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡಬೇಕಿದೆ ಎಂದು ಮೋದಿ ಹೇಳಿದ್ದಾರೆ.

ಸಭೆಯನ್ನು ಬಹಿಷ್ಕರಿ ಸಿರುವ ಮುಖ್ಯಮಂತ್ರಿ ಗಳು ಆತ್ಮಾವ ಲೋಕನ ಮಾಡಿಕೊಳ್ಳ ಬೇಕು. ಅವರ ಈ ನಿರ್ಧಾರ ಸಹಕಾರ ಒಕ್ಕೂಟಕ್ಕೆ ಅನುಗುಣ ವಾಗಿದೆಯೇ ಎಂದು ಚಿಂತನ ಮಂಥನ ಮಾಡಬೇಕು.

– ಅರುಣ್ ಜೇಟ್ಲಿ

No Comments

Leave A Comment