Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ನವದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 9 ಸಾವು

buildingನವದೆಹಲಿ : ದೆಹಲಿಯ ಪಶ್ಚಿಮ ಭಾಗದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು 9 ಜನ ಸಾವನ್ನಪ್ಪಿದ್ದು  8 ಜನರಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ದೆಹಲಿಯ ವಿಷ್ಣು ಗಾರ್ಡನ್‌ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ಅವಶೇಷಗಳ ಅಡಿ ಇನ್ನು 10 ಜನ ಸಿಲುಕಿರುವ ಸಾಧ್ಯತೆಯಿದ್ದು 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 8 ಕ್ಕೂ ಹೆಚ್ಚು ಅಗ್ನಿಶಾಮಕದಳದ ತಂಡಗಳು ಮತ್ತು ಎನ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಈ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಜನವಸತಿ ಪ್ರದೇಶದಲ್ಲೇ ಇಂಥ ಅವಘಡ ಸಂಭವಿಸಿರುವುದು ನಾಗರಿಕರಲ್ಲಿ ಭಯ ಹುಟ್ಟುಹಾಕಿದೆ. ಇದು ಕಾನೂನು ಬಾಹಿರವಾಗಿ ನಿರ್ಮಾಣವಾದ ಕಟ್ಟಡವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರು. ಮತ್ತು ಗಾಯಾಳುಗಳಿಗೆ 50 ಸಾವಿರ ಪರಿಹಾರ ಧನವನ್ನು ದೆಹಲಿ ಸರ್ಕಾರ ಘೋಷಣೆ ಮಾಡಿದೆ.

No Comments

Leave A Comment