Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಗುರುವಾಯೂರು ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

guruvayoತ್ರಿಶ್ಶೂರ್: ಕೇರಳದ ಪ್ರಸಿದ್ಧ ಗುರುವಾಯೂರು  ಶ್ರೀಕೃಷ್ಣ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ. ಈ ಸಂದೇಶ ಖತ್ತರ್ ನಿಂದ ಬಂದಿರುವುದಾಗಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಗುರುವಾಯೂರ್ ನ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಮಂಗಳವಾರ ಬೆಳಗ್ಗೆ ಫೋನ್‌ಗೆ ಕರೆ ಮಾಡಿದ ದುಷ್ಕರ್ಮಿಗಳು 24 ಗಂಟೆಯೊಳಗೆ ದೇವಾಲಯದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು.

ಬೆದರಿಕೆ ಕರೆ ಮಾಡಿದವರು ಮಲಯಾಳಂ ಭಾಷೆಯಲ್ಲಿ ಮಾತನಾಡಿದ್ದು, ಕೆಲವರ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ. ಆದಾಗ್ಯೂ, ಪೊಲೀಸ್ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿಷಯಗಳನ್ನು ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಗುರುವಾಯೂರ್ ದೇವಾಲಯದ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರನ್ನು ತೀವ್ರ ತಪಾಸಣೆಗೊಳಪಡಿಸಿದ ನಂತರವೇ ಒಳಗೆ ಬಿಡಲಾಗುತ್ತಿದೆ.

No Comments

Leave A Comment