Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಲಲಿತ್ ಮೋದಿಗೆ ಜಾಮೀನುರಹಿತ ವಾರೆಂಟ್ ನೀಡಿ-ಜಾರಿ ನಿರ್ದೇಶನಾಲಯ

lalith-7ನವದೆಹಲಿ: ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಗಡುವು ಸೋಮವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಲಲಿತ್ ಮೋದಿ ವಿರುದ್ಧ ಜಾಮೀನು ರಹಿತ ವಾರೆಂಟ್ ನೀಡುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಹಣ ದುರ್ಬಳಕೆ ಆರೋಪ ಎದುರಿಸುತ್ತಿರುವ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯ ಖುದ್ದು ಜುಲೈ 20ರೊಳಗೆ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿತ್ತು. 2010 ರಿಂದ ಲಂಡನ್ ನಲ್ಲಿ ವಾಸವಿರುವ ಲಲಿತ್ ಮೋದಿ ಜಾರಿ ನಿರ್ದೇಶನಾಲಯದ ನೊಟೀಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ.

2008ರ ಐಪಿಎಲ್ ಪಂದ್ಯಾವಳಿ ಪ್ರಸಾರದ ಹಕ್ಕು ವಿತರಣೆಯಲ್ಲಿ 425 ಕೋಟಿ ಡೀಲ್ ಸಂಬಂಧ ಲಲಿತ್ ಮೋದಿ ವಿರುದ್ಧ ದೂರು ದಾಖಲಾಗಿತ್ತು. ಜಾರಿ ನಿರ್ದೇಶನಾಲಯ ದೂರಿನ ಹಿನ್ನೆಲೆಯಲ್ಲಿ 2009 ರಲ್ಲಿ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು.

No Comments

Leave A Comment